ದೇಶ

ಕಾಶ್ಮೀರ: ಬಸ್ ಕಮರಿಗೆ ಬಿದ್ದು ಮೂವರು ಬಿಎಸ್‌ಎಫ್ ಯೋಧರು ಸಾವು, 12 ಸಿಬ್ಬಂದಿಗೆ ಗಾಯ

ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಚುನಾವಣಾ ಕರ್ತವ್ಯಕ್ಕಾಗಿ ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಾಡಿಗೆ ಬಸ್ಸೊಂದು ಬುದ್ಗಾಮ್ ಜಿಲ್ಲೆಯ ವಾಟರ್‌ಹಾಲ್‌ ಬಳಿ ಕಮರಿಗೆ ಬಿದ್ದಿದೆ.

ಕಾಶ್ಮೀರ: ಬಸ್ ಕಮರಿಗೆ ಬಿದ್ದು ಮೂವರು ಬಿಎಸ್‌ಎಫ್ ಯೋಧರು ಸಾವು, 12 ಸಿಬ್ಬಂದಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯಕ್ಕಾಗಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಕನಿಷ್ಠ ಮೂವರು ಬಿಎಸ್‌ಎಫ್ ಯೋಧರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಚುನಾವಣಾ ಕರ್ತವ್ಯಕ್ಕಾಗಿ ಬಿಎಸ್‌ಎಫ್ ಯೋಧರನ್ನು ಹೊತ್ತೊಯ್ಯುತ್ತಿದ್ದ ಬಾಡಿಗೆ ಬಸ್ಸೊಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ವಾಟರ್‌ಹಾಲ್‌ನ ಬ್ರೆಲ್ ಬಳಿ ಕಮರಿಗೆ ಬಿದ್ದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಪಘಾತದಲ್ಲಿ ಸುಮಾರು 12 ಯೋಧರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸೈನಿಕರು ಚಿಕಿತ್ಸೆಫಲಕಾರಿಯಾಗದೆ ಆಸ್ಪತ್ರೆಯಲ್ಲಿಸಾವನ್ನಪ್ಪಿದ್ದಾರೆ. ಇತರರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.