ದೇಶ

ಮಹಾರಾಷ್ಟ್ರ: ಸೇತುವೆಯಿಂದ ಕೆಳಗೆ ಬಿದ್ದ ಬಸ್, ನಾಲ್ವರು ಸಾವು, 30 ಮಂದಿಗೆ ಗಾಯ

ಪರತವಾಡಿ ಧಾನಿ ಮಾರ್ಗದ ಬಸ್ ಮೇಲ್ಘಾಟ್‌ನ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಸೇತುವೆ ಕೆಳಗೆ ಬಿದ್ದಿದೆ.

ಮಹಾರಾಷ್ಟ್ರ: ಸೇತುವೆಯಿಂದ ಕೆಳಗೆ ಬಿದ್ದ ಬಸ್, ನಾಲ್ವರು ಸಾವು, 30 ಮಂದಿಗೆ ಗಾಯ
ಅಪಘಾತಕ್ಕೀಡಾದ ಬಸ್
Published On :

ಅಮರಾವತಿ: ಖಾಸಗಿ ಬಸ್ ವೊಂದು ಸೇತುವೆಯಿಂದ ಕೆಳಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 30 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಸೆಮಡೋಹ್ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.

ಪರತವಾಡಿ ಧಾನಿ ಮಾರ್ಗದ ಬಸ್ ಮೇಲ್ಘಾಟ್‌ನ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಸೇತುವೆ ಕೆಳಗೆ ಬಿದ್ದಿದೆ.

ಘಟನೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದು, 30 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಸೌರಭ್ ಕಟಿಯಾರ್ ಮಾಹಿತಿ ನೀಡಿದ್ದಾರೆ. ತೀವ್ರವಾಗಿ ಗಾಯಗೊಂಡ ಮೂವರನ್ನು ಸೆಮಡೋಹ್ ಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.