'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಮೋದಿಗೆ ಇಷ್ಟವಿಲ್ಲ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಅವರು 'ಜಾತಿ ಗಣತಿ' ಎಂಬ ಪದವನ್ನು ಹೇಳಲೂ ಹೆದರುತ್ತಾರೆ ಮತ್ತು 'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಅವರಿಗೆ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ನವದೆಹಲಿ: ಬಿಜೆಪಿ "ಬಹುಜನ ವಿರೋಧಿ" ಎಂದು ಆರೋಪಿಸಿದ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು, ಕೇಸರಿ ಪಕ್ಷ ಎಷ್ಟೇ ಸುಳ್ಳುಗಳನ್ನು ಹರಡಿದರೂ "ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ" ಎಂದು ಸೋಮವಾರ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 'ಜಾತಿ ಗಣತಿ' ಎಂಬ ಪದವನ್ನು ಹೇಳಲೂ ಹೆದರುತ್ತಾರೆ ಮತ್ತು 'ಬಹುಜನರು' ತಮ್ಮ ಹಕ್ಕುಗಳನ್ನು ಪಡೆಯುವುದು ಅವರಿಗೆ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
"ಬಹುಜನ ವಿರೋಧಿ ಬಿಜೆಪಿ ಎಷ್ಟೇ ಸುಳ್ಳುಗಳನ್ನು ಹರಡಲಿ - ಮೀಸಲಾತಿಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ" ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಹೇಳಿದ್ದಾರೆ.
‘ಸಮಗ್ರ ಜಾತಿ ಗಣತಿ ನಡೆದು ಪ್ರತಿ ವರ್ಗದ ಹಕ್ಕು, ಪಾಲು, ನ್ಯಾಯ ಸಿಗುವವರೆಗೆ ಮೀಸಲಾತಿ ಮೇಲಿನ ಶೇ.50ರ ಮಿತಿಯನ್ನು ತೆಗೆದು ಹಾಕುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದಿದ್ದಾರೆ.
"ಮೋದಿ ಜಿಯವರು 'ಜಾತಿ ಗಣತಿ' ಎಂದು ಹೇಳಲೂ ಹೆದರುತ್ತಾರೆ, ಬಹುಜನರು ತಮ್ಮ ಹಕ್ಕುಗಳನ್ನು ಪಡೆಯುವುದನ್ನು ಅವರು ಬಯಸುವುದಿಲ್ಲ!
"ನಾನು ಮತ್ತೊಮ್ಮೆ ಹೇಳುತ್ತೇನೆ - ನನಗೆ ಇದು ರಾಜಕೀಯ ವಿಷಯವಲ್ಲ, ಬಹುಜನರಿಗೆ ನ್ಯಾಯ ದೊರಕಿಸಿಕೊಡುವುದು ನನ್ನ ಜೀವನದ ಧ್ಯೇಯವಾಗಿದೆ" ಎಂದು ಪ್ರತಿಪಕ್ಷ ನಾಯಕ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



