ಬಿಹಾರ: 1600 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಕುಸಿತ
2011ರ ಜೂನ್ ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 5.57 ಕಿಮೀ ಉದ್ದದ ಭಕ್ತಿಯಾರ್‌ಪುರ-ತಾಜ್‌ಪುರ ಗಂಗಾ ಮಹಾಸೇತು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಆ ಸಮಯದಲ್ಲಿ ಈ ಯೋಜನೆಯ ಒಟ್ಟು ವೆಚ್ಚ 1,602.74 ಕೋಟಿ ರೂಪಾಯಿ ಆಗಿತ್ತು.

ಪಾಟ್ನಾ: ಇದೀಗ ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿದಿದೆ. ರಾಜಧಾನಿ ಪಾಟ್ನಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಕುಸಿದಿದೆ. ಭಾನುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಬಿಹಾರದ ಹಲವು ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಸೇತುವೆಗಳು ಕುಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ನಿರ್ಮಾಣ ಹಂತದಲ್ಲಿರುವ ಸೇತುವೆಯ ಭಾಗವು ಬಿಹಾರ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (BSRDCL) ನಿರ್ವಹಿಸುತ್ತಿರುವ ಭಕ್ತಿಯಾರ್‌ಪುರ-ತಾಜ್‌ಪುರ ಗಂಗಾ ಮಹಾಸೇತುವಿನ ಭಾಗವಾಗಿದೆ. ಗರ್ಡರ್‌ನ ಬೇರಿಂಗ್‌ಗಳನ್ನು ಬದಲಾಯಿಸುವಾಗ ಮತ್ತು ಪಿಲ್ಲರ್‌ಗೆ ಗರ್ಡರ್ ಹಾಕುವಾಗ ಒಂದು ಭಾಗ ಕೆಳಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.
ಬಿಎಸ್‌ಆರ್‌ಡಿಸಿಎಲ್ ಮುಖ್ಯ ಜನರಲ್ ಮ್ಯಾನೇಜರ್ ಪ್ರವೀಣ್ ಚಂದ್ರ ಗುಪ್ತಾ ಅವರು, 'ಬೇರಿಂಗ್ ಬದಲಾಯಿಸುವುದು ವಾಡಿಕೆಯ ಕಾರ್ಯವಿಧಾನವಾಗಿದೆ. ಯಾವುದೇ ಸಾವು ನೋವು ಸಂಭವಿಸಿದ ಸುದ್ದಿ ಇಲ್ಲ. ಕಾಮಗಾರಿಯನ್ನು ಪರಿಶೀಲಿಸುತ್ತೇವೆ. ವರದಿಯ ಪ್ರಕಾರ, ಈ ಸೇತುವೆಯ ನಿರ್ಮಾಣವು ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿದೆ.
2011ರ ಜೂನ್ ನಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 5.57 ಕಿಮೀ ಉದ್ದದ ಭಕ್ತಿಯಾರ್‌ಪುರ-ತಾಜ್‌ಪುರ ಗಂಗಾ ಮಹಾಸೇತು ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಆ ಸಮಯದಲ್ಲಿ ಈ ಯೋಜನೆಯ ಒಟ್ಟು ವೆಚ್ಚ 1,602.74 ಕೋಟಿ ರೂಪಾಯಿ ಆಗಿತ್ತು. ಈ ಯೋಜನೆ ಪೂರ್ಣಗೊಂಡ ನಂತರ, ಸಮಸ್ತಿಪುರದ ರಾಷ್ಟ್ರೀಯ ಹೆದ್ದಾರಿ 28 ಮತ್ತು ಪಾಟ್ನಾದ ರಾಷ್ಟ್ರೀಯ ಹೆದ್ದಾರಿ 31 ಅನ್ನು ಸಂಪರ್ಕಿಸಬಹುದು.
ಸರ್ಕಾರದ ವಿರುದ್ಧ ತೇಜಸ್ವಿ ವಾಗ್ದಾಳಿ
ಸೇತುವೆಯ ಒಂದು ಭಾಗ ಕುಸಿದ ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ತೇಜಸ್ವಿ ಯಾದವ್ ಅವರು ಟ್ವಿಟರ್‌ನಲ್ಲಿ ವ್ಯಂಗ್ಯವಾಗಿ ಪೋಸ್ಟ್ ಮಾಡಿದ್ದಾರೆ. ಎನ್‌ಡಿಎ ಸರ್ಕಾರದ ಅಡಿಪಾಯವು ಕಮಿಷನ್, ಲಂಚ, ಸಾಂಸ್ಥಿಕ ಭ್ರಷ್ಟಾಚಾರ, ಹಣಕಾಸು ಅಕ್ರಮಗಳು, ಅಕ್ರಮ ಸುಲಿಗೆಗಳ ಮೇಲೆ ಆಧಾರಿತವಾಗಿದೆ ಎಂಬುದನ್ನು ಈ ಘಟನೆ ಸಾಬೀತುಪಡಿಸುತ್ತದೆ ಎಂದು ಟ್ವೀಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



