ತಿರುಪತಿ ಲಡ್ಡು ವಿವಾದ: ತುಪ್ಪ ಪೂರೈಕೆದಾರ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಗೆ FSSAI ನೋಟಿಸ್
2011ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ(ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸೇರ್ಪಡೆಗಳು) ನಿಯಮಾವಳಿಗಳ ಉಲ್ಲಂಘನೆಗಾಗಿ ನಿಮ್ಮ ಪರವಾನಗಿಯನ್ನು ಏಕೆ ಅಮಾನತುಗೊಳಿಸಬಾರದು?

ನವದೆಹಲಿ: ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಕಲಬೆರಕೆ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ತಿರುಮಲ ದೇವಸ್ಥಾನಕ್ಕೆ ತುಪ್ಪ ಪೂರೈಸಿದ ತಮಿಳುನಾಡು ಮೂಲದ ಕಂಪನಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ(FSSAI) ಶೋಕಾಸ್ ನೋಟಿಸ್ ಜಾರಿ ಮಾಡಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
2011ರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ(ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಆಹಾರ ಸೇರ್ಪಡೆಗಳು) ನಿಯಮಾವಳಿಗಳ ಉಲ್ಲಂಘನೆಗಾಗಿ ನಿಮ್ಮ ಪರವಾನಗಿಯನ್ನು ಏಕೆ ಅಮಾನತುಗೊಳಿಸಬಾರದು ಎಂದು ಆಹಾರ ನಿಯಂತ್ರಕರು ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ನೀಡಿದ ನೋಟಿಸ್‌ನಲ್ಲಿ ಪ್ರಶ್ನಿಸಿದೆ.
ನೋಟಿಸ್ ಪ್ರಕಾರ, ದಿಂಡಿಗಲ್‌ನಲ್ಲಿರುವ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ಕಳೆದ ನಾಲ್ಕು ವರ್ಷಗಳಿಂದ ತಿರುಮಲ ತಿರುಪತಿ ದೇವಸ್ಥಾನಕ್ಕೆ(ಟಿಟಿಡಿ) ತುಪ್ಪವನ್ನು ಪೂರೈಸುವ ಸಂಸ್ಥೆಗಳಲ್ಲಿ ಒಂದಾಗಿದೆ ಎಂದು ಮಂಗಳಗಿರಿ(ಆಂಧ್ರಪ್ರದೇಶ) ಇನ್‌ಸ್ಟಿಟ್ಯೂಟ್ ಆಫ್ ಪ್ರಿವೆಂಟಿವ್ ಮೆಡಿಸಿನ್ ನಿರ್ದೇಶಕರಿಂದ ಮಾಹಿತಿ ಪಡೆಯಲಾಗಿದೆ ಎಂದು ಎಫ್‌ಎಸ್‌ಎಸ್‌ಎಐ ಹೇಳಿದೆ.
ಮಾಹಿತಿಯ ಪ್ರಕಾರ, ಟಿಟಿಡಿಯ ತುಪ್ಪ ಖರೀದಿ ಸಮಿತಿಯು ಪರೀಕ್ಷೆಗಾಗಿ ಟಿಟಿಡಿಗೆ ತುಪ್ಪ ಸರಬರಾಜು ಮಾಡಿದ ಎಲ್ಲಾ ಕಂಪನಿಗಳ ಮಾದರಿಗಳನ್ನು ಗುಜರಾತ್‌ನ ಆನಂದ್‌ನಲ್ಲಿರುವ ಎನ್‌ಡಿಡಿಬಿ ಕ್ಯಾಲ್ಫ್ ಲ್ಯಾಬ್‌ಗೆ ಕಳುಹಿಸಿದೆ.
"ಪರೀಕ್ಷೆಯಲ್ಲಿ ನಿಮ್ಮ ಸಂಸ್ಥೆಯ M/s. A R ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ (FSSAI ಸೆಂಟ್ರಲ್ ಲೈಸೆನ್ಸ್ ಸಂಖ್ಯೆ 10014042001610) ಮಾದರಿಯು ನಿಯತಾಂಕಗಳನ್ನು ಪೂರೈಸಲು ವಿಫಲವಾಗಿದೆ ಮತ್ತು ನಿಮ್ಮ ಸಂಸ್ಥೆಯನ್ನು EO, TTD ನಿಂದ ಕಪ್ಪುಪಟ್ಟಿಗೆ ಸೇರಿಸಲಾಗಿದೆ" ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



