AAP ಶಾಸಕ ಅಮಾನತುಲ್ಲಾ ನ್ಯಾಯಾಂಗ ಬಂಧನ ವಿಸ್ತರಣೆ!
ಸೋಮವಾರ ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಖಾನ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ತೀರ್ಪು ಪ್ರಕಟಿಸಿದರು.

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.
ಸೋಮವಾರ ಅವರ ನ್ಯಾಯಾಂಗ ಬಂಧನ ಮುಗಿದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶ ರಾಕೇಶ್ ಸೈಲ್ ಖಾನ್ ಅವರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ತೀರ್ಪು ಪ್ರಕಟಿಸಿದರು.
ದೆಹಲಿಯ ಓಖ್ಲಾದಲ್ಲಿರುವ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಜಾರಿ ನಿರ್ದೇಶನಾಲಯ (ಇಡಿ) ಸೆಪ್ಟೆಂಬರ್ 2 ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಅವರನ್ನು ಬಂಧಿಸಿತ್ತು. ಈ ಹಂತದಲ್ಲಿ ಖಾನ್ ಅವರನ್ನು ಬಿಡುಗಡೆ ಮಾಡುವುದರಿಂದ ಸಾಕ್ಷಿಗಳನ್ನು ತಿರುಚಲು ಕಾರಣವಾಗಬಹುದು ಮತ್ತು ತನಿಖೆಗೆ ಅಡ್ಡಿಯಾಗಬಹುದು ಎಂದು ಇಡಿ ವಾದಿಸಿತು.
ಹುಡುಕಾಟದ ನಂತರ ವಿಚಾರಣೆಯ ಸಮಯದಲ್ಲಿ ಖಾನ್ "ತಪ್ಪಿಸಿಕೊಳ್ಳುತ್ತಿದ್ದರು. ಇದರಿಂದ ಅವರನ್ನು ಬಂಧಿಸಬೇಕಾಯಿತು. ಖಾನ್ ಅಧ್ಯಕ್ಷರಾಗಿರುವ ದೆಹಲಿ ವಕ್ಫ್ ಬೋರ್ಡ್‌ಗೆ ಸಂಬಂಧಿಸಿದ ಅಕ್ರಮ ಆಸ್ತಿಗಳ ಆರೋಪಗಳಿಗೆ ಸಂಬಂಧಿಸಿದ ಆರ್ಥಿಕ ದುರ್ಬಳಕೆ ಅಪರಾಧ ಕುರಿತು ಸಂಸ್ಥೆ ತನಿಖೆ ನಡೆಸುತ್ತಿದೆ ಎಂದು ಇಡಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



