ದೆಹಲಿ: ಒಂದು ವಾರದಲ್ಲಿ 300 Dengue ಪ್ರಕರಣ ವರದಿ!
ಕಳೆದ ವರ್ಷಕ್ಕೆ ಹೋಲಿಸಿದರೆ ಇಲ್ಲಿಯವರೆಗೆ ಮಲೇರಿಯಾ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಈ ತಿಂಗಳವರೆಗೆ ದೆಹಲಿಯಲ್ಲಿ ಈಗಾಗಲೇ 363 ಮಲೇರಿಯಾ ಪ್ರಕರಣಗಳು ವರದಿಯಾಗಿದೆ.

ದೆಹಲಿ: ದೆಹಲಿಯಲ್ಲಿ ಒಂದೇ ವಾರದಲ್ಲಿ 3000 ಡೆಂಗ್ಯು ಪ್ರಕರಣಗಳು ವರದಿಯಾಗಿವೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಸೊಳ್ಳೆಯಿಂದ ಹರಡುವ ಸಾಂಕ್ರಾಮಿಕ ರೋಗ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ.
ಕಳೆದ ವರ್ಷಕ್ಕೆ ಹೋಲಿಸಿದರೆ ಇಲ್ಲಿಯವರೆಗೆ ಮಲೇರಿಯಾ ಪ್ರಕರಣಗಳು ಗಣನೀಯವಾಗಿ ಹೆಚ್ಚಿವೆ. ಈ ತಿಂಗಳವರೆಗೆ ದೆಹಲಿಯಲ್ಲಿ ಈಗಾಗಲೇ 363 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, 2023ರ ಸೆಪ್ಟೆಂಬರ್ ತಿಂಗಳಲ್ಲಿ 294 ಪ್ರಕರಣಗಳು ವರದಿಯಾಗಿತ್ತು.
ಕಳೆದ ವರ್ಷ ಒಟ್ಟು 426 ಮಲೇರಿಯಾ ಪ್ರಕರಣಗಳು ವರದಿಯಾಗಿತ್ತು. ಹೆಚ್ಚಿನ ಸಂಖ್ಯೆಯ ಮಲೇರಿಯಾ ಪ್ರಕರಣಗಳು ಪಶ್ಚಿಮ ದೆಹಲಿ ವಲಯದಿಂದ ವರದಿಯಾಗಿವೆ. ಚಿಕೂನ್ ಗುನ್ಯಾಕ್ಕೆ ಸಂಬಂಧಿಸಿದಂತೆ ಇದುವರೆಗೆ 43 ಪ್ರಕರಣಗಳು ವರದಿಯಾಗಿವೆ. ಇದು ಕಳೆದ ವರ್ಷಕ್ಕಿಂತ ದ್ವಿಗುಣವಾಗಿದೆ. ಕಳೆದ ವರ್ಷ ಒಟ್ಟು 65 ವೈರಸ್ ಪ್ರಕರಣಗಳು ವರದಿಯಾಗಿತ್ತು. ಈ ವರ್ಷ ದಕ್ಷಿಣ ದೆಹಲಿ ವಲಯದಿಂದ ಅತಿ ಹೆಚ್ಚು ಚಿಕೂನ್‌ಗುನ್ಯಾ ಪ್ರಕರಣಗಳು ವರದಿಯಾಗಿವೆ.
ಕಳೆದ ವಾರ, ನಗರದಲ್ಲಿ ಏಳು ದಿನಗಳಲ್ಲಿ ಸುಮಾರು 250 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದೆ ಎಂದು ಪಿಟಿಐ ವರದಿ ಮಾಡಿದೆ. ನಗರದಲ್ಲಿ ಇದುವರೆಗೆ ಒಟ್ಟು 1,229 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಲೋಕನಾಯಕ ಆಸ್ಪತ್ರೆಯಲ್ಲಿ ದಾಖಲಾದ 54 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



