ದೇಶ

ನಟಿ ಮೇಲೆ ಅತ್ಯಾಚಾರ ಆರೋಪ: ಕೇರಳ ಶಾಸಕ ಹಾಗೂ ನಟ ಮುಖೇಶ್ ಬಂಧನ

ಶಾಸಕ ಹಾಗೂ ನಟ ಎಂ ಮುಖೇಶ್ ಅವರನ್ನು ಬಂಧಿಸಿ, ಅವರ ವೈದ್ಯಕೀಯ ಪರೀಕ್ಷೆ ಮತ್ತು ಪುರುಷತ್ವ ಪರೀಕ್ಷೆಯನ್ನು ನಡೆಸಲಾಯಿತು.

ನಟಿ ಮೇಲೆ ಅತ್ಯಾಚಾರ ಆರೋಪ: ಕೇರಳ ಶಾಸಕ ಹಾಗೂ ನಟ ಮುಖೇಶ್ ಬಂಧನ
ಶಾಸಕ ಹಾಗೂ ನಟ ಮುಖೇಶ್
Published On :

ಕೊಚ್ಚಿ: ಮಹಿಳಾ ನಟಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಡಳಿತಾರೂಢ ಸಿಪಿಐ(ಎಂ) ಶಾಸಕ ಹಾಗೂ ನಟ ಎಂ ಮುಖೇಶ್ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ) ಮಂಗಳವಾರ ಔಪಚಾರಿಕವಾಗಿ ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಶಾಸಕರನ್ನು ಬಂಧಿಸಲಾಗಿತ್ತು. ಅವರ ವೈದ್ಯಕೀಯ ಪರೀಕ್ಷೆ ಮತ್ತು ಪುರುಷತ್ವ ಪರೀಕ್ಷೆಯನ್ನು ನಡೆಸಲಾಯಿತು. ಈ ತಿಂಗಳ ಆರಂಭದಲ್ಲಿ ಅವರು ಸೆಷನ್ಸ್ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದರಿಂದ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಅವರ ವಕೀಲರು ಖಚಿತಪಡಿಸಿದ್ದಾರೆ.

ನಟನ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅವರನ್ನು ವಿಚಾರಣೆಗೆ ಕರೆದ ನಂತರ ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಇಂದು ಬೆಳಗ್ಗೆ 9.45ಕ್ಕೆ ಇಲ್ಲಿನ ಕರಾವಳಿ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿರುವ ಎಸ್‌ಐಟಿ ಎದುರು ಮುಕೇಶ್‌ ಅವರು ವಿಚಾರಣೆಗೆ ಹಾಜರಾಗಿದ್ದು, ಮೂರೂವರೆ ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು.

ಮುಖೇಶ್ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಒಂದು ವಡಕ್ಕಂಚೇರಿ ಪೊಲೀಸ್ ಠಾಣೆಯಲ್ಲಿ ಮತ್ತು ಇನ್ನೊಂದು ಮರಡು ಪೊಲೀಸರು ನಟನ ವಿರುದ್ಧ ಕೇಸ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.