ಮಾನನಷ್ಟ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್'ಗೆ 15 ದಿನ ಜೈಲು ಶಿಕ್ಷೆ, 25 ಸಾವಿರ ರೂ ದಂಡ
ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮುಂಬೈ: ಮಾನನಷ್ಟ ಪ್ರಕರಣವೊಂದರಲ್ಲಿ ಶಿವಸೇನೆ (ಉದ್ಧವ್ ಬಣ) ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಅವರನ್ನು ದೋಷಿ ಎಂದು ಘೋಷಿಸಿರುವ ಮುಂಬೈನ ಮಝಗಾಂವ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್, 15 ದಿನಗಳ ಸೆರೆವಾಸ ಮತ್ತು ರೂ. 25,000 ದಂಡ ವಿಧಿಸಿದೆ.
ಬಿಜೆಪಿ ನಾಯಕ ಕಿರಿಟ್ ಸೋಮಯ್ಯ ಅವರ ಪತ್ನಿ ಡಾ.ಮೇಧಾ ಕಿರಿಟ್ ಸೋಮಯ್ಯ ಅವರ ದೂರಿನ ಮೇರೆಗೆ ರಾವತ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮೀರಾ ಭಯಂದರ್‌ನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ಸಂಬಂಧಿಸಿದ 100 ಕೋಟಿ ರೂ. ಹಗರಣದಲ್ಲಿ ತಾನು ಮತ್ತು ತನ್ನ ಪತಿ ಭಾಗಿಯಾಗಿದ್ದಾರೆ ಎಂದು ಆಧಾರರಹಿತ ಮತ್ತು ಮಾನಹಾನಿಕರ ಆರೋಪಗಳನ್ನು ರಾವತ್ ಮಾಡಿದ್ದಾರೆ ಎಂದು ಆರೋಪಿಸಿ ಮೇಧಾ ಸೋಮಯ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಜನಸಾಮಾನ್ಯರ ಮುಂದೆ ನನ್ನ ವರ್ಚಸ್ಸು ಹಾಳು ಮಾಡಲು ಆರೋಪ ಮಾಡಲಾಗಿದೆ ಎಂದು ಹೇಳಿದ್ದರು.
ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ಸಂಜಯ್ ರಾವತ್ ಅವರಿಗೆ 15 ದಿನಗಳ ಜೈಲು, 25,000 ರೂ. ದಂಡ ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



