ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ಗೆ ಕಲ್ಲು ತೂರಾಟ!
ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಆದರೆ ಪ್ಯಾಂಟ್ರಿ ಕಾರು ಸೇರಿದಂತೆ ಮೂರು ಕೋಚ್‌ಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಮಷ್ಟಿಪುರ: ಜಯನಗರ್-ನವದೆಹಲಿ ನಡುವಿನ ಸ್ವತಂತ್ರ ಸೇನಾನಿ ಎಕ್ಸ್ ಪ್ರೆಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬಿಹಾರದ ಸಮಷ್ಟಿಪುರದ ಬಳಿ ಈ ಘಟನೆ ನಡೆದಿದೆ ಎಂದು ಇಸಿಆರ್ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಯಾವುದೇ ವ್ಯಕ್ತಿ ಗಾಯಗೊಂಡಿಲ್ಲ ಆದರೆ ಪ್ಯಾಂಟ್ರಿ ಕಾರು ಸೇರಿದಂತೆ ಮೂರು ಕೋಚ್‌ಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.
ಗುರುವಾರ ರಾತ್ರಿ 9.50ರ ಸುಮಾರಿಗೆ ರೈಲು ರೈಲು ನಿಲ್ದಾಣದ ಹೊರ ಸಿಗ್ನಲ್ ತಲುಪಿದಾಗ ಈ ಘಟನೆ ನಡೆದಿದೆ. ಕಲ್ಲು ತೂರಾಟ ನಡೆದ ತಕ್ಷಣ ಎಚ್ಚೆತ್ತ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದ್ದು, ಸ್ವಲ್ಪ ಸಮಯದ ನಂತರ ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ಸಿಬ್ಬಂದಿ ಕೂಡ ಸ್ಥಳಕ್ಕೆ ತಲುಪಿದ್ದಾರೆ.
ಇಸಿಆರ್ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್‌ಒ) ಶರ್ಸ್ವತಿ ಚಂದ್ರ ಪಿಟಿಐ ಜೊತೆಗೆ ಮಾತನಾಡಿದ್ದು, “ಸ್ವತಂತ್ರ ಸೇನಾನಿ ಎಕ್ಸ್‌ಪ್ರೆಸ್ ಹೊರಭಾಗದ ಸಿಗ್ನಲ್ ತಲುಪಿದಾಗ ಸಮಸ್ತಿಪುರ ರೈಲು ನಿಲ್ದಾಣದ ಬಳಿ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು ಎಂದು ಹೇಳಿದ್ದಾರೆ.
"ಸ್ವಲ್ಪ ಸಮಯದ ನಂತರ, ಸಮಸ್ತಿಪುರದಿಂದ ಹೊರಡುವ ರೈಲು ಮುಜಾಫರ್‌ಪುರ ರೈಲು ನಿಲ್ದಾಣಕ್ಕೆ ಹೊರಟಿತು" ಎಂದು ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಮಸ್ತಿಪುರ ರೈಲ್ವೆ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್‌ಒ) ಆರ್‌ಕೆ ಸಿಂಗ್, “ಪ್ಯಾಂಟ್ರಿ ಕಾರಿನ ಕಿಟಕಿ ಫಲಕಗಳು ಮತ್ತು ಎ1 ಮತ್ತು ಬಿ 2 ಕೋಚ್‌ಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



