ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ!
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ ಉದ್ದಾನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಬಿಡಿಭಾಗಗಳ ಪೇಂಟಿಂಗ್ ಘಟಕದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಅಗ್ನಿ ಅವಘಡ ಬೆನ್ನಲ್ಲೇ ಇಡೀ ಘಟಕದ ತುಂಬ ದಟ್ಟ ಹೊಗೆ ಆವರಿಸಿದ್ದು, ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ಭೀತಿ ಆವರಿಸಿದೆ. ಎಲ್ಲಾ ಉದ್ಯೋಗಿಗಳನ್ನು ಆವರಣದಿಂದ ಸ್ಥಳಾಂತರಿಸಲಾಗಿದ್ದು, ವಿಚಾರ ತಿಳಿದ ಕೂಡಲೇ ಏಳು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ದುರ್ಘಟನೆಯಲ್ಲಿ ಈ ವರೆಗೂ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.
ಮೂಲಗಳ ಪ್ರಕಾರ ಘಟನೆಯ ಸಮಯದಲ್ಲಿ, ಮೊದಲ ಪಾಳಿಯಲ್ಲಿ ಸುಮಾರು 1,500 ಕಾರ್ಮಿಕರು ಕರ್ತವ್ಯದಲ್ಲಿದ್ದರು ಎಂದು ಹೇಳಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


