ದೇಶ

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಐವರು ಯೋಧರಿಗೆ ಗಾಯ

ಐಇಡಿಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲು ನಡೆಸಿದ ಮೈನಿಂಗ್ ಕಾರ್ಯಾಚರಣೆಯಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರ ಕಾಲಿಗೆ ಐಇಡಿ ಸಂಪರ್ಕ ಹೊಂದಿದ ತಂತಿ ತಗುಲಿದ ಪರಿಣಾಮ ಸ್ಫೋಟ ಸಂಭವಿಸಿದೆ.

ಛತ್ತೀಸ್‌ಗಢದಲ್ಲಿ ನಕ್ಸಲರಿಂದ ಐಇಡಿ ಸ್ಫೋಟ: ಐವರು ಯೋಧರಿಗೆ ಗಾಯ
ಸಂಗ್ರಹ ಚಿತ್ರ
Published On :

ಬಿಜಾಪುರ: ನಕ್ಸಲರು ಅಡಗಿಸಿಟ್ಟಿದ್ದ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಂಡು ಐವರು ಭದ್ರತಾ ಸಿಬ್ಬಂದಿಗಳಿಗೆ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ವಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.

ಚಿಂಗೆಲೂರು ಸಿಆರ್‌ಪಿಎಫ್ ಶಿಬಿರದಿಂದ ಭದ್ರತಾ ಸಿಬ್ಬಂದಿಯ ತಂಡವೊಂದು ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಆರ್‌ಪಿಎಫ್ ಶಿಬಿರದಿಂದ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಐಇಡಿ ಸ್ಪೋಟಗೊಂಡಿದೆ.

ಐಇಡಿಗಳನ್ನು ಪತ್ತೆಹಚ್ಚಿ ನಿಷ್ಕ್ರಿಯಗೊಳಿಸಲು ನಡೆಸಿದ ಮೈನಿಂಗ್ ಕಾರ್ಯಾಚರಣೆಯಲ್ಲಿ, ಭದ್ರತಾ ಸಿಬ್ಬಂದಿಯೊಬ್ಬರ ಕಾಲಿಗೆ ಐಇಡಿ ಸಂಪರ್ಕ ಹೊಂದಿದ ತಂತಿ ತಗುಲಿದ ಪರಿಣಾಮ ಸ್ಫೋಟ ಸಂಭವಿಸಿದೆ. ಪರಿಣಾಮ ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.