ಸುಪ್ರೀಂ ಕೋರ್ಟ್ ನೆರವು: ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗೆ ಐಐಟಿ ಪ್ರವೇಶ
ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ.

ನವದೆಹಲಿ: ಐಐಟಿ ಧನ್ಬಾದ್ ನಲ್ಲಿ ಶುಲ್ಕ ಪಾವತಿಸಲು ಹಣವಿಲ್ಲದೇ ಪ್ರವೇಶ ಪಡೆಯಲು ಸಾಧ್ಯವಾಗದ ಪರಿಸ್ಥಿತಿ ಎದುರಿಸುತ್ತಿದ್ದ ದಲಿತ ಯುವಕನ ನೆರವಿಗೆ ಸುಪ್ರೀಂ ಕೋರ್ಟ್ ಧಾವಿಸಿದೆ.
ಸಂಸ್ಥೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದ್ದು, ಬಿಟೆಕ್ ಕೋರ್ಸ್ ಗೆ ಆತನಿಗೆ ಪ್ರವೇಶ ಕಲ್ಪಿಸುವುದಕ್ಕೆ ಸೂಚನೆ ನೀಡಿದ್ದು, ಇಂತಹ ಯುವ ಪ್ರತಿಭಾನ್ವಿತ ಯುವಕರು ಬಿಟ್ಟು ಹೋಗುವುದಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ನ್ಯಾ.ಡಿವೈ ಚಂದ್ರಚೂಡ್ ಹಾಗೂ ನ್ಯಾ. ಜೆಬಿ ಪರ್ದಿವಾಲ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿದೆ.
ಅತುಲ್ ಕುಮಾರ್ ಗೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಬಿಟೆಕ್ ಕೋರ್ಸ್‌ಗೆ ಪ್ರವೇಶ ನೀಡುವುದಕ್ಕೆ ಐಐಟಿ ಧನ್‌ಬಾದ್‌ಗೆ ಸೂಚನೆ ನೀಡಲು ಉನ್ನತ ನ್ಯಾಯಾಲಯ ಸಂವಿಧಾನದ 142 ನೇ ವಿಧಿಯ ಅಡಿಯಲ್ಲಿ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿದೆ. "ಪ್ರವೇಶವನ್ನು ಪಡೆಯಲು ಎಲ್ಲಾ ಅರ್ಹತೆ ಪಡೆದ ಗುಂಪಿಗೆ ಸೇರಿದ ಅರ್ಜಿದಾರರಂತಹ ಪ್ರತಿಭಾವಂತ ವಿದ್ಯಾರ್ಥಿಯನ್ನು ಬಿಡಬಾರದು ಎಂದು ನಾವು ಭಾವಿಸುತ್ತೇವೆ ಎಂದು ಕೋರ್ಟ್ ಹೇಳಿದೆ.
ಐಐಟಿ ಧನ್‌ಬಾದ್‌ಗೆ ಅಭ್ಯರ್ಥಿಗೆ ಪ್ರವೇಶ ನೀಡುವಂತೆ ನಾವು ನಿರ್ದೇಶಿಸುತ್ತೇವೆ ಮತ್ತು ಶುಲ್ಕವನ್ನು ಪಾವತಿಸಿದರೆ ಅವರಿಗೆ ಪ್ರವೇಶ ನೀಡಲಾಗುತ್ತಿದ್ದ ಅದೇ ಬ್ಯಾಚ್‌ನಲ್ಲಿ ಪ್ರವೇಶ ಕಲ್ಪಿಸಬೇಕು, ”ಎಂದು ಪೀಠ ಆದೇಶದಲ್ಲಿ ಹೇಳಿದೆ. ನ್ಯಾಯದ ಹಿತದೃಷ್ಟಿಯಿಂದ ಯಾವುದೇ ಆದೇಶವನ್ನು ಹೊರಡಿಸಲು ನ್ಯಾಯಾಲಯಕ್ಕೆ ಸಂವಿಧಾನದ 142 ನೇ ವಿಧಿ ಉನ್ನತ ಅಧಿಕಾರವನ್ನು ನೀಡುತ್ತದೆ.
18 ವರ್ಷದ ಅತುಲ್ ಕುಮಾರ್ ಪೋಷಕರು ಜೂನ್ 24 ರೊಳಗೆ ಸ್ವೀಕಾರ ಶುಲ್ಕವಾಗಿ ರೂ 17,500 ಠೇವಣಿ ಮಾಡಲು ವಿಫಲರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



