ಕೇಂದ್ರ ಬಜೆಟ್-2024: ಆದಾಯ ತೆರಿಗೆ ಮಿತಿಯಲ್ಲಿ ಬದಲಾವಣೆ ಇಲ್ಲ; 10 ವರ್ಷಗಳಲ್ಲಿ ತೆರಿಗೆ ಸಂಗ್ರಹ ದುಪ್ಪಟ್ಟು!
ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ.

ನವದೆಹಲಿ: ಕೇಂದ್ರ ಸರ್ಕಾರದ 2024-25 ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಮುಕ್ತಾಯಗೊಂಡಿದೆ. ಬಜೆಟ್ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹಲವು ಮೂಲಸೌಕರ್ಯ ಯೋಜನೆಗಳ ಘೋಷಣೆಗಳು ಹಾಗೂ ಮಧ್ಯಮ ವರ್ಗಕ್ಕೆ ಒಂದಷ್ಟು ಹೊಸ ಯೋಜನೆಗಳನ್ನು ಪರಿಚಯಿಸಿದ್ದಾರೆ.
ಆರೋಗ್ಯ ಹಾಗೂ ಮೂಲಸೌಕರ್ಯ, ಕೃಷಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆಯನ್ನು ಬಜೆಟ್ ನಲ್ಲಿ ನೀಡಲಾಗಿದೆ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಆದಾಯ ತೆರಿಗೆ ಮಿತಿಯನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗಿದೆ.
7 ಲಕ್ಷದವರೆಗಿನ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ಲಭ್ಯತೆ ಮುಂದುವರೆದಿದ್ದು, ಹೊಸ ತೆರಿಗೆ ಪದ್ಧತಿಯನ್ನು ಮುಂದುವರೆಸಲಾಗಿದೆ. ಕಳೆದ 10 ವರ್ಷಗಳಲ್ಲಿ ಆದಾಯ ತೆರಿಗೆ ಸಂಗ್ರಹ ದುಪ್ಪಟ್ಟಾಗಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಮಾಹಿತಿ ನೀಡಿದ್ದಾರೆ.
ಆದಾಯ ತೆರಿಗೆ ವಿನಾಯಿತಿಯಷ್ಟೇ ಅಲ್ಲದೇ, ಆಮದು ಸುಂಕ ಸೇರಿದಂತೆ ಇನ್ನಿತರ ತೆರಿಗೆಗಳನ್ನೂ ಸಹ ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಲಾಗಿದೆ.
ಇನ್ನು ಸಣ್ಣ ಆದಾಯ ಹಿಂತೆಗೆತ ತೆರಿಗೆಗೆ ಸಂಬಂಧಿಸಿದಂತೆ ಯೋಜನೆಯೊಂದನ್ನು ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
"ಬಾಕಿ ಉಳಿದಿರುವ ನೇರ ತೆರಿಗೆ ಬೇಡಿಕೆಗಳನ್ನು 2009-10 ರವರೆಗಿನ ಅವಧಿಗೆ ಸಂಬಂಧಿಸಿದಂತೆ ರೂ 25000 ವರೆಗೆ, 2013-14 ರವರೆಗಿನ ಅವಧಿಗೆ ಸಂಬಂಧಿಸಿದಂತೆ ರೂ 10,000 ವರೆಗೆ ಹಿಂಪಡೆಯಲಾಗುತ್ತದೆ. 1 ಕೋಟಿ ತೆರಿಗೆದಾರರು ಇದರ ಲಾಭ ಪಡೆಯಲಿದ್ದಾರೆ.
ಆದಾಯ ತೆರಿಗೆ ದರಗಳು ಈಗಾಗಲೇ ಕಡಿಮೆಯಾಗಿದ್ದು, ಸರ್ಕಾರವು ಪ್ರತಿ ವರ್ಷಕ್ಕೆ 2.4 ಲಕ್ಷ ರೂ.ನಿಂದ 7.5 ಲಕ್ಷ ರೂ.ಗೆ ಪ್ರಮಾಣಿತ ಕಡಿತವನ್ನು ಹೆಚ್ಚಿಸಿದೆ ಎಂದು ಸಚಿವರು ಹೇಳಿದರು.
2013-14ನೇ ಸಾಲಿನಲ್ಲಿ ತೆರಿಗೆ ಮರುಪಾವತಿ ಸರಾಸರಿ ಪ್ರಕ್ರಿಯೆ ಸಮಯವನ್ನು 93 ದಿನಗಳಿಂದ ಈ ವರ್ಷ ಕೇವಲ 10 ದಿನಗಳಿಗೆ ಇಳಿಸಲಾಗಿದೆ. ಇದರಿಂದಾಗಿ ಮರುಪಾವತಿಯನ್ನು ವೇಗವಾಗಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಇದಲ್ಲದೆ, ಕಳೆದ 10 ವರ್ಷಗಳಲ್ಲಿ ತೆರಿಗೆ ಮರುಪಾವತಿಯನ್ನು ಸಲ್ಲಿಸುವವರ ಸಂಖ್ಯೆ 2.4 ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದರು. ಈ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹ ಮೂರು ಪಟ್ಟು ಹೆಚ್ಚಾಗಿದೆ ಎಂದು ಸೀತಾರಾಮನ್ ಹೇಳಿದರು. ಆರ್ಥಿಕ ವರ್ಷ 2018 ರಿಂದ GSTಯ ತೆರಿಗೆ ಮೂಲ ದ್ವಿಗುಣಗೊಂಡಿದೆ. ಸರಾಸರಿ ಮಾಸಿಕ ಜಿಎಸ್‌ಟಿ ಕೂಡ ದ್ವಿಗುಣಗೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


