ಹೇಮಂತ್ ಸೋರೆನ್ ಗೆ ಒಂದು ದಿನ ನ್ಯಾಯಾಂಗ ಬಂಧನ, ಇಡಿ ಕಸ್ಟಡಿಗೆ ನೀಡುವ ಬಗ್ಗೆ ನಾಳೆ ನಿರ್ಧಾರ
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಒಂದು ದಿನ ನ್ಯಾಯಾಂಗ...

ರಾಂಚಿ: ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಒಂದು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಆರೋಪಿಯನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡುವ ಬಗ್ಗೆ ಶುಕ್ರವಾರ ನಿರ್ಧರಿಸಲಿದೆ.
ತೀವ್ರ ವಿಚಾರಣೆಯ ಬಳಿಕ ನಿನ್ನೆ ತಡರಾತ್ರಿ ಸೋರೆನ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯ ಇಂದು ಬೆಳಗ್ಗೆ ರಾಂಚಿ ವಿಶೇಷ ಕೋರ್ಟ್ ಗೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ತನ್ನ ವಶಕ್ಕೆ ನೀಡುವಂತೆ ಮನವಿ ಮಾಡಿತ್ತು.
ಆರೋಪಿಯ ವಿಚಾರಣೆ ನಡೆಸಿದ ವಿಶೇಷ ಕೋರ್ಟ್, ಶುಕ್ರವಾರದ ನಂತರ 10 ದಿನಗಳ ಕಸ್ಟಡಿಗೆ ನೀಡುವ ಇಡಿ ಕೋರಿಕೆಯ ಕುರಿತು ನ್ಯಾಯಾಲಯ ಆದೇಶ ನೀಡುವ ಸಾಧ್ಯತೆಯಿದೆ.
ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೋರೆನ್ ಅವರು ರಾಜ್ಯದಲ್ಲಿ ನಡೆದ 600 ಕೋಟಿ ಭೂ ಹಗರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಇಡಿ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


