ದೇಶ

'ಅಮ್ಮಾ.. ನಿರ್ಮಲಮ್ಮಾ... ಯಾಕೆ ಸುಳ್ಳು ಹೇಳ್ತೀಯಾ ತಾಯಿ... 11,495 ಕೋಟಿ ರೂ. ಯಾಕೆ ಕೊಡಲಿಲ್ಲ': ಸಿದ್ದರಾಮಯ್ಯ

ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಹಾಸ್ಯಮಿಶ್ರಿತವಾಗಿ ನಯವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

'ಅಮ್ಮಾ.. ನಿರ್ಮಲಮ್ಮಾ... ಯಾಕೆ ಸುಳ್ಳು ಹೇಳ್ತೀಯಾ ತಾಯಿ... 11,495 ಕೋಟಿ ರೂ. ಯಾಕೆ ಕೊಡಲಿಲ್ಲ': ಸಿದ್ದರಾಮಯ್ಯ
ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕರು
Published On :

ನವದೆಹಲಿ: ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಇಂದು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಹಾಸ್ಯಮಿಶ್ರಿತವಾಗಿ ನಯವಾಗಿ ತರಾಟೆಗೆ ತೆಗೆದುಕೊಂಡು ಅಣಕಿಸಿದ್ದಾರೆ. 

ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರಮೇಶ ಮಾಡದೇ ಇದ್ದರೂ ಹಣ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿ ಅಮ್ಮಾ ನಿರ್ಮಲಮ್ಮಾ, ನೀವು 11, 495 ಕೋಟಿ ರೂಪಾಯಿ ಏಕೆ ಕೊಡಲಿಲ್ಲ ತಾಯಿ... ಯಾಕಮ್ಮಾ ಸುಳ್ಳು ಹೇಳ್ತಿಯಾ ತಾಯಿ, ಯಾಕಮ್ಮಾ ಸದನದಲ್ಲಿ ಸುಳ್ಳು ಹೇಳಿ ದೇಶದ ಜನರನ್ನು ತಪ್ಪು ದಾರಿಗೆಳೆಯುತ್ತಿದ್ದೀರಿ ಎಂದು ಪ್ರಶ್ನಿಸಿದರು.

11,495 ಕೋಟಿ ರೂಪಾಯಿ ಕರ್ನಾಟಕಕ್ಕೆ ಬಾರದಂತೆ ತಡೆಹಿಡಿದವರು ನಿರ್ಮಲಾ ಸೀತಾರಾಮನ್, ಕರ್ನಾಟಕವನ್ನು ರಾಜ್ಯಸಭೆಯಲ್ಲಿ ಪ್ರತಿನಿಧಿಸುವ ಅವರೇ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಹಣಕಾಸು ಆಯೋಗ ನಿಯೋಜಿಸುವ ಅಧಿಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ. 15ನೇ ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತದವರು ಯಾರು ಇರಲಿಲ್ಲ. ಇದರಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯವನ್ನು ಸರಿಪಡಿಸಲು ನಮ್ಮ ಇಂದಿನ ಪ್ರತಿಭಟನೆ ಎಂದರು. 

ಕರ್ನಾಟಕಕ್ಕೆ ಅನ್ಯಾಯ ಆಗಲು ಸಿದ್ದರಾಮಯ್ಯ ಹೊಣೆ ಅಲ್ಲ. ಈ ಅನ್ಯಾಯಕ್ಕೆ ಕಾರಣ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ. ಸತ್ಯ ಮುಚ್ಚಿಡಲು ಸಾಧ್ಯವಿಲ್ಲ ಯಡಿಯೂರಪ್ಪ, ಬೊಮ್ಮಾಯಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.