ದೆಹಲಿ ಅಬಕಾರಿ ನೀತಿ ಪ್ರಕರಣ: ಮೂರನೇ ಬಾರಿಯೂ ಇ.ಡಿ ವಿಚಾರಣೆಗೆ ಅರವಿಂದ ಕೇಜ್ರಿವಾಲ್ ಗೈರು
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇ.ಡಿ ನೀಡಿರುವ ಮೂರನೇ ಸಮನ್ಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿರುವುದಾಗಿ ಎಎಪಿ ಮೂಲಗಳು ತಿಳಿಸಿವೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಇ.ಡಿ ನೀಡಿರುವ ಮೂರನೇ ಸಮನ್ಸ್‌ಗೆ ಲಿಖಿತ ಉತ್ತರ ನೀಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ವಿಚಾರಣೆಗೆ ಗೈರಾಗಿದ್ದು, ನೋಟಿಸ್ ಕಾನೂನುಬಾಹಿರ ಎಂದು ಹೇಳಿರುವುದಾಗಿ ಎಎಪಿ ಮೂಲಗಳು ತಿಳಿಸಿವೆ.
ತನಿಖಾ ಸಂಸ್ಥೆಗೆ ಎಲ್ಲಾ ರೀತಿಯಲ್ಲೂ ಸಹಕರಿಸಲು ಕೇಜ್ರಿವಾಲ್ ಸಿದ್ಧರಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಪ್ರತಿಪಾದಿಸಿದೆ. ಆದರೆ, ಅವರನ್ನು ಬಂಧಿಸಲು ಸಮನ್ಸ್ ಕಳುಹಿಸಲಾಗಿದೆ ಎಂದು ಹೇಳಿಕೊಂಡಿದೆ.
'ಲೋಕಸಭಾ ಚುನಾವಣೆಗೂ ಮುನ್ನವೇ ನೋಟಿಸ್ ಕಳುಹಿಸಿದ್ದು ಏಕೆ? ಕೇಜ್ರಿವಾಲ್ ಅವರನ್ನು ಚುನಾವಣಾ ಪ್ರಚಾರದಿಂದ ತಡೆಯುವ ಪ್ರಯತ್ನವೇ ಈ ನೋಟೀಸ್' ಎಂದು ಪಕ್ಷ ಆರೋಪಿಸಿದೆ.
ಅಬಕಾರಿ ನೀತಿಗೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬುಧವಾರ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿತ್ತು.
ನವೆಂಬರ್ 2 ಮತ್ತು ಡಿಸೆಂಬರ್ 21 ರಂದು ನೀಡಿದ್ದ ಎರಡು ಸಮನ್ಸ್‌ಗಳನ್ನು ಧಿಕ್ಕರಿಸಿದ್ದ ಅರವಿಂದ ಕೇಜ್ರಿವಾಲ್ ಅವರು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗಿರಲಿಲ್ಲ. ಕೇಜ್ರಿವಾಲ್‌ಗೆ ಇದು ಮೂರನೇ ಇ.ಡಿ ನೋಟಿಸ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


