ಮತ್ತೆ ಏರಿಕೆಯ ಹಾದಿಯತ್ತ ಕೊರೋನಾ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 602 ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 4,440
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 602 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 5 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 602 ಹೊಸ ಕೋವಿಡ್ 19 ಪ್ರಕರಣಗಳು ಮತ್ತು 5 ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 602 ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,15,083 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,440ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,371ಕ್ಕೆ ಏರಿಕೆಯಾಗಿದ್ದು, ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,44,77,272ಕ್ಕೆ ತಲುಪಿದೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 17,605 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 93,58,79,495 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,20,67,79,081 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


