ರಾಜಸ್ಥಾನ: ಬಸ್ಸಿನೊಳಗೆ ಮಹಿಳೆ ಮೇಲೆ ಅತ್ಯಾಚಾರ, ಕಂಡಕ್ಟರ್ ಬಂಧನ
ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬಸ್ಸಿನೊಳಗೆ 25 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬಸ್ಸಿನೊಳಗೆ 25 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಆರೋಪಿಯನ್ನು ಜಿತೇಂದ್ರ ಸಿಂಗ್ ಗುರ್ಜರ್(32) ಎಂದು ಗುರುತಿಸಲಾಗಿದೆ.
ಸೋಮವಾರ ಸಂಜೆ ಇಲ್ಲಿನ ಟ್ರಾನ್ಸ್‌ಪೋರ್ಟ್ ನಗರದಿಂದ ಭರತ್‌ಪುರಕ್ಕೆ ತೆರಳುತ್ತಿದ್ದ ಬಸ್‌ಗೆ ಮಹಿಳೆ ಹತ್ತಿದ್ದರು.
ಬಸ್ ಭರತ್‌ಪುರದ ಬಯಾನಾ ತಲುಪಿದ ನಂತರ ಗುರ್ಜರ್, ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಯಾನಾ ಸರ್ಕಲ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಓಂಪ್ರಕಾಶ್ ಕಿಲಾನಿಯಾ ಅವರು ತಿಳಿಸಿದ್ದಾರೆ.
ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಆರೋಪಿಯನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿವೆ ಎಂದು ಕಿಲಾನಿಯಾ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


