ದೇಶ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಗೈರು

ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಆದರೆ ದೆಹಲಿಯ ಝಾಂಡೇವಾಲನ್ ದೇವಸ್ಥಾನದಲ್ಲಿ ಐತಿಹಾಸಿಕ...

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಗೈರು
ಜೆಪಿ ನಡ್ಡಾ
Published On :

ನವದೆಹಲಿ: ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ನಡೆಯುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ. ಆದರೆ ದೆಹಲಿಯ ಝಾಂಡೇವಾಲನ್ ದೇವಸ್ಥಾನದಲ್ಲಿ ಐತಿಹಾಸಿಕ ಘಟನೆಯನ್ನು ವೀಕ್ಷಿಸಲಿದ್ದಾರೆ.

ಈ ಕುರಿತು ಇಂದು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಜೆಪಿ ನಡ್ಡಾ ಅವರು, ಜನವರಿ 22 ರ "ಪ್ರಾಣ ಪ್ರತಿಷ್ಠಾಪನೆ" ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ದೇವಾಲಯದ ನಿರ್ಮಾಣ ಮತ್ತು ನಿರ್ವಹಣೆಯ ಉಸ್ತುವಾರಿ ವಹಿಸಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಧನ್ಯವಾದ ತಿಳಿಸಿದ್ದಾರೆ.

500 ವರ್ಷಗಳ ಹೋರಾಟದ ನಂತರ ಭವ್ಯ ಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22ರ ನಂತರ ಕುಟುಂಬ ಸಮೇತ ಅಯೋಧ್ಯೆಗೆ ಭೇಟಿ ನೀಡಿ ದರ್ಶನ ಪಡೆಯುವುದಾಗಿ ನಡ್ಡಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಆಹ್ವಾನಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.