ಚೀನಾದಲ್ಲಿ 7.2 ತೀವ್ರತೆಯ ಭೂಕಂಪ, ದೆಹಲಿಯಲ್ಲೂ ಕಂಪಿಸಿದ ಭೂಮಿ
ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ...

ನವದೆಹಲಿ: ಚೀನಾದ ಕ್ಸಿನ್‌ಜಿಯಾಂಗ್‌ನ ದಕ್ಷಿಣ ಭಾಗದಲ್ಲಿ ಸೋಮವಾರ ರಾತ್ರಿ 7.2 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಪ್ರಬಲ ಕಂಪನದ ಅನುಭವವಾಗಿದೆ.
ಇಂದು ರಾತ್ರಿ 11 ಗಂಟೆಯ ಸುಮಾರಿಗೆ ಚೀನಾದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲೂ ಭೂಮಿ ಕಂಪಿಸಿದೆ. ಯಾವುದೇ ಗಾಯ ಅಥವಾ ನಷ್ಟದ ಬಗ್ಗೆ ವರದಿಯಾಗಿಲ್ಲ. 80 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಟ್ವೀಟ್ ಮಾಡಿದೆ.
ಕಳೆದ ಜನವರಿ 11 ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಪರಿಣಾಮ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


