ನಾಗಾಲ್ಯಾಂಡ್ ಕಲ್ಲಿದ್ದಲು ಗಣಿಯಲ್ಲಿ ಭಾರಿ ಅಗ್ನಿ ಅವಘಡ; ಆರು ಕಾರ್ಮಿಕರು ಸಜೀವ ದಹನ
ನಾಗಾಲ್ಯಾಂಡ್ನ ವೋಖಾ ಜಿಲ್ಲೆಯ ರುಚಯಾನ್ ಗ್ರಾಮದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಆರು ಕಾರ್ಮಿಕರು ಸಜೀವ ದಹನವಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.

ಗುವಾಹಟಿ: ನಾಗಾಲ್ಯಾಂಡ್ನ ವೋಖಾ ಜಿಲ್ಲೆಯ ರುಚಯಾನ್ ಗ್ರಾಮದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಆರು ಕಾರ್ಮಿಕರು ಸಜೀವ ದಹನವಾಗಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ.
ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯ ಕುರಿತು ಜಿಲ್ಲಾ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.
ಮೃತರು ಹಾಗೂ ಗಾಯಾಳು ಕಾರ್ಮಿಕರು ಅಸ್ಸಾಂ ಮೂಲದವರು. ಗಾಯಾಳುಗಳು ನಾಗಾಲ್ಯಾಂಡ್ನ ವಾಣಿಜ್ಯ ಕೇಂದ್ರವಾದ ದಿಮಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಸೋರಿಕೆಯಿಂದಾಗಿ ಜನರೇಟರ್ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಗಣಿಯಿಂದ ಬಿಡುಗಡೆಯಾದ ಅನಿಲ ಅವಘಡಕ್ಕೆ ಕಾರಣ ಎಂದು ಕೆಲವು ಸ್ಥಳೀಯರು ಹೇಳಿದ್ದಾರೆ.
ಘಟನೆಯ ಸಮಯದಲ್ಲಿ ಗಣಿಯಲ್ಲಿ ಅಗ್ನಿಶಾಮಕ ಸೇರಿದಂತೆ ಯಾವುದೇ ಸುರಕ್ಷತಾ ಕ್ರಮಗಳು ಲಭ್ಯವಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಆರು ಕಾರ್ಮಿಕರ ಕುಟುಂಬಗಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡಲು ಗಣಿ ಮಾಲೀಕರು ನಿರ್ಧರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


