ಬಿಹಾರದಲ್ಲಿ ಜೆಡಿಯು ಜೊತೆಗೆ ಸರ್ಕಾರ ರಚನೆಗೆ ಬಿಜೆಪಿ ಶಾಸಕರ ಒಮ್ಮತದ ನಿರ್ಣಯ: ಇಬ್ಬರು ಡಿಸಿಎಂ ಸಾಧ್ಯತೆ
ಬಿಹಾರದಲ್ಲಿ ಬಿಜೆಪಿ, ಜೆಡಿಯು ಮತ್ತಿತರ ಮೈತ್ರಿ ಪಕ್ಷಗಳೊಂದಿಗೆ ಎನ್ ಡಿಎ ಸರ್ಕಾರ ರಚನೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಸಾಮ್ರಾಟ್ ಚೌಧರಿ ಶಾಸಕಾಂಗ ಪಕ್ಷದ ನಾಯಕರಾಗಿ, ವಿಜಯ್ ಸಿನ್ಹಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.

ಪಾಟ್ನಾ: ಬಿಹಾರದಲ್ಲಿ ಬಿಜೆಪಿ, ಜೆಡಿಯು ಮತ್ತಿತರ ಮೈತ್ರಿ ಪಕ್ಷಗಳೊಂದಿಗೆ ಎನ್ ಡಿಎ ಸರ್ಕಾರ ರಚನೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಸಾಮ್ರಾಟ್ ಚೌಧರಿ ಶಾಸಕಾಂಗ ಪಕ್ಷದ ನಾಯಕರಾಗಿ, ವಿಜಯ್ ಸಿನ್ಹಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.
ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ದೆ, ರಾಜ್ಯದ ಜನರ ಹಿತದೃಷ್ಟಿಯಿಂದ ಬಿಹಾರದಲ್ಲಿ ಜೆಡಿಯು ಮತ್ತಿತರ ಎನ್ ಡಿಎ ಅಂಗಪಕ್ಷಗಳೊಂದಿಗೆ ಅಧಿಕಾರ ರಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಎಲ್ಲಾ ಶಾಸಕರು ಜೆಡಿಯು ನೊಂದಿಗೆ ಜಂಟಿ ಸಭೆ ನಡೆಸಿದ ಬಳಿಕ ರಾಜ್ಯಪಾಲರನ್ನು ಭೇಟಿಯಾಗಿ ಬೆಂಬಲ ಪತ್ರ ಹಸ್ತಾಂತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ ಮಾತನಾಡಿ,ನಿತೀಶ್ ಕುಮಾರ್ ಅವರ ರಾಜೀನಾಮೆ ನೀಡಿದ ನಂತರ ಹೊಸ ಸರ್ಕಾರ ರಚನೆಗೆ ಬಿಜೆಪಿ ಬೆಂಬಲಿಸಲು ನಿರ್ಧರಿಸಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಹಾರದಲ್ಲಿ 40 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


