'ನಿತೀಶ್ ಕುಮಾರ್ ತಪ್ಪು ಮಾಡಿದ್ದಾರೆ, ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ': ಕೇಜ್ರಿವಾಲ್
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ನಿರ್ಗಮಿಸುವ ಮೂಲಕ ತಪ್ಪು ಮಾಡಿದ್ದಾರೆ. ಅವರ ಈ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು...

ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟ ನಿರ್ಗಮಿಸುವ ಮೂಲಕ ತಪ್ಪು ಮಾಡಿದ್ದಾರೆ. ಅವರ ಈ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.
ಬಿಹಾರದಲ್ಲಿ ನಿತೀಶ್ ಕುಮಾರ್ ಅವರು ಮತ್ತೆ ಬಿಜೆಪಿಯೊಂದಿಗೆ ಸರ್ಕಾರ ರಚಿಸಿದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, "ಇದು ತಪ್ಪು ಎಂದು ನಾನು ಭಾವಿಸುತ್ತೇನೆ ಮತ್ತು ಅವರು ಪ್ರತಿಪಕ್ಷಗಳೊಂದಿಗಿನ ಮೈತ್ರಿ ಮುರಿದುಕೊಳ್ಳಬಾರದಿತ್ತು. ಇಂತಹ ನಡವಳಿಕೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ" ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಕೇಜ್ರಿವಾಲ್ ನೇತೃತ್ವದ ಎಎಪಿ ಇಂಡಿಯಾ ಮೈತ್ರಿಕೂಟ ಭಾಗವಾಗಿದೆ ಮತ್ತು ಐದು ರಾಜ್ಯಗಳಾದ ದೆಹಲಿ, ಪಂಜಾಬ್, ಗುಜರಾತ್, ಗೋವಾ ಹಾಗೂ ಹರಿಯಾಣದಲ್ಲಿ ಕಾಂಗ್ರೆಸ್‌ನೊಂದಿಗೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸುತ್ತಿದೆ
ನಿತೀಶ್ ಕುಮಾರ್ ಅವರು ಭಾನುವಾರ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ 'ಮಹಾಘಟಬಂಧನ್' ಜೊತೆ ಮೈತ್ರಿ ಮುರಿದುಕೊಂಡಿದ್ದರು ಮತ್ತು ಬಿಜೆಪಿ ಬೆಂಬಲದೊಂದಿಗೆ ಮತ್ತೆ ಹೊಸ ಸರ್ಕಾರ ರಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


