ಪಶ್ಚಿಮ ಬಂಗಾಳ: ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ಕು ಮಕ್ಕಳು ಸೇರಿ ಏಳು ಮಂದಿ ಸಾವು
ಮನೆಯಲ್ಲಿ ಸಂಗ್ರಹಿಸಲಾದ ಪಟಾಕಿಗಳು ಹೊತ್ತಿ ಉರಿದು ಬೆಂಕಿ ವ್ಯಾಪಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅವರು ಹೇಳಿದ್ದಾರೆ.

ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಥರ್ ಪ್ರತಿಮಾದಲ್ಲಿರುವ ಮನೆಯೊಂದರಲ್ಲಿ ಸೋಮವಾರ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ನಾಲ್ವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ 7 ಜನ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಥರ್ ಪ್ರತಿಮಾ ಬ್ಲಾಕ್‌ನ ಧೋಲಾಹತ್ ಗ್ರಾಮದಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಮಹಿಳೆ ಕೂಡ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಮನೆಯಿಂದ ಎಲ್ಲಾ ಶವಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್‌ಪಿ ಕೋಟೇಶ್ವರ ರಾವ್ ಪಿಟಿಐಗೆ ತಿಳಿಸಿದ್ದಾರೆ. ಮೃತರೆಲ್ಲರೂ ಒಂದೇ ಕುಟುಂಬದವರಾಗಿರಬಹುದು ಎಂದೂ ಅವರು ಹೇಳಿದ್ದಾರೆ.
ಮನೆಯಲ್ಲಿ ಸಂಗ್ರಹಿಸಲಾದ ಪಟಾಕಿಗಳು ಹೊತ್ತಿ ಉರಿದು ಬೆಂಕಿ ವ್ಯಾಪಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ. ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ಅವರು ಹೇಳಿದ್ದಾರೆ. ಮನೆಯೊಳಗೆ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತೆ? ಎಂಬ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಮನೆಯಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಇದ್ದವು ಮತ್ತು ಒಳಗೆ ಸಂಗ್ರಹಿಸಲಾದ ಪಟಾಕಿಗಳಿಗೆ ಬೆಂಕಿ ಹೊತ್ತಿಕೊಂಡ ಕಾರಣ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



