ರಾಜಸ್ಥಾನ: ರಾಸಾಯನಿಕ ಕಾರ್ಖಾನೆಯಲ್ಲಿ ಅನಿಲ ಸೋರಿಕೆ, ಮಾಲೀಕ ಸೇರಿ ಮೂವರು ಸಾವು
ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ತಡರಾತ್ರಿ ನೈಟ್ರಿಕ್ ಆಮ್ಲ ಸೋರಿಕೆಯಾಗಿ 53 ಜನ ಅಸ್ವಸ್ಥರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹೇಂದ್ರ ಖಡ್ಗಾವತ್ ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಬೀವರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಿಲ್ಲಿಸಲಾಗಿದ್ದ ಟ್ಯಾಂಕರ್ನಿಂದ ವಿಷಕಾರಿ ಅನಿಲ ಸೋರಿಕೆಯಾಗಿ ಮೂವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಕಾರ್ಖಾನೆ ಮಾಲೀಕ ಮತ್ತು ಇತರ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅವರು ಹೇಳಿದ್ದಾರೆ.
ಬಡಿಯಾದ ವಸತಿ ಪ್ರದೇಶದಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ಈ ರಾಸಾಯನಿಕ ಕಾರ್ಖಾನೆಯಲ್ಲಿ ಸೋಮವಾರ ತಡರಾತ್ರಿ ನೈಟ್ರಿಕ್ ಆಮ್ಲ ಸೋರಿಕೆಯಾಗಿ 53 ಜನ ಅಸ್ವಸ್ಥರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹೇಂದ್ರ ಖಡ್ಗಾವತ್ ತಿಳಿಸಿದ್ದಾರೆ.
ಅನಿಲ ಸೋರಿಕೆಪರಿಸ್ಥಿತಿಯನ್ನು ಸಕಾಲಕ್ಕೆ ನಿಯಂತ್ರಿಸಲಾಗಿದೆ ಎಂದು ಅವರು ಹೇಳಿದರು.
ಪೊಲೀಸ್ ವರಿಷ್ಠಾಧಿಕಾರಿ ಶ್ಯಾಮ್ ಸಿಂಗ್ ಅವರ ಪ್ರಕಾರ, ವಿಷಕಾರಿ ಅನಿಲ ಉಸಿರಾಡಿದ ನಂತರ ಸುತ್ತಮುತ್ತಲಿನ ಹಲವಾರು ಜನ ಅಸ್ವಸ್ಥರಾಗಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಚಿಕಿತ್ಸೆ ಫಲಕಾರಿಯಾಗದೆ ಕಾರ್ಖಾನೆ ಮಾಲೀಕ ಸುನಿಲ್ ಸಿಂಘಾಲ್(47) ಸೋಮವಾರ ರಾತ್ರಿ ನಿಧನರಾದರು, ಸ್ಥಳೀಯ ನಿವಾಸಿಗಳಾದ ದಯಾರಾಮ್ (52) ಮತ್ತು ನರೇಂದ್ರ ಸೋಲಂಕಿ (40) ಅವರು ಮಂಗಳವಾರ ನಿಧನರಾದರು ಎಂದು ಅವರು ಹೇಳಿದ್ದಾರೆ.
ಅಜ್ಮೀರ್ನ ಜೆಎಲ್ಎನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶದ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



