ದೇಶ

ಅತ್ಯಾಚಾರ ಪ್ರಕರಣ: ಪಾದ್ರಿ ಬಜೀಂದರ್ ಸಿಂಗ್‌ಗೆ ಜೀವಾವಧಿ ಶಿಕ್ಷೆ!

ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಸ್ವಯಂ ಘೋಷಿತ ಕ್ರಿಶ್ಚಿಯನ್ ಪಾದ್ರಿ ಬಜೀಂದರ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ (ADSJ)ವಿಕ್ರಾಂತ್ ಕುಮಾರ್ ಅವರು ಮಂಗಳವಾರ ತೀರ್ಪು ನೀಡಿದರು.

ಅತ್ಯಾಚಾರ ಪ್ರಕರಣ: ಪಾದ್ರಿ ಬಜೀಂದರ್ ಸಿಂಗ್‌ಗೆ ಜೀವಾವಧಿ ಶಿಕ್ಷೆ!
ಬಜೀಂದರ್ ಸಿಂಗ್‌
Published On :

ಮೊಹಾಲಿ: 2018 ರಲ್ಲಿ ನಡೆದಿದ್ದ ಅತ್ಯಾಚಾರ ಪ್ರಕರಣದಲ್ಲಿ ಪಾದ್ರಿ ಬಜೀಂದರ್ ಸಿಂಗ್ ಅವರಿಗೆ ಪಂಜಾಬ್‌ನ ಮೊಹಾಲಿ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ.

ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಸ್ವಯಂ ಘೋಷಿತ ಕ್ರಿಶ್ಚಿಯನ್ ಪಾದ್ರಿ ಬಜೀಂದರ್ ಸಿಂಗ್ ಅವರಿಗೆ ಜೀವಾವಧಿ ಶಿಕ್ಷೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ (ADSJ) ವಿಕ್ರಾಂತ್ ಕುಮಾರ್ ಅವರು ಮಂಗಳವಾರ ತೀರ್ಪು ನೀಡಿದರು.

ಮೊಹಾಲಿಯ ಜಿರಾಕ್‌ಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) 323( ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ವಿದೇಶಕ್ಕೆ ಕರೆದುಕೊಂಡು ಹೋಗುವುದಾಗಿ ಆಮಿಷವೊಡ್ಡಿದ್ದ ಬಜೀಂದರ್, ತನ್ನ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದರು. ಈ ಪ್ರಕರಣದಲ್ಲಿ ಬಜೀಂದರ್ ಸಿಂಗ್ ದೋಷಿ ಎಂದು ಮಾರ್ಚ್ 27 ರಂದು ನ್ಯಾಯಾಲಯ ತೀರ್ಪು ನೀಡಿತ್ತು.

ಮಂಗಳವಾರ ಶಿಕ್ಷೆ ಪ್ರಕಟ ಹಿನ್ನೆಲೆಯಲ್ಲಿ ನ್ಯಾಯಾಲಯದ ಆವರಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.