ದೇಶ

ಏಕನಾಥ್ ಶಿಂದೆ ಬಗ್ಗೆ ಅವಹೇಳನ: ಕಾಮಿಡಿಯನ್​ ಕುನಾಲ್ ಕಾಮ್ರಾಗೆ ಪೊಲೀಸರಿಂದ 3ನೇ ಸಮನ್ಸ್ ಜಾರಿ

ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.

ಏಕನಾಥ್ ಶಿಂದೆ ಬಗ್ಗೆ ಅವಹೇಳನ: ಕಾಮಿಡಿಯನ್​ ಕುನಾಲ್ ಕಾಮ್ರಾಗೆ ಪೊಲೀಸರಿಂದ 3ನೇ ಸಮನ್ಸ್ ಜಾರಿ
ಕುನಾಲ್ ಕಾಮ್ರಾ-ಏಕನಾಥ್ ಶಿಂಧೆ.
Published On :

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಏಪ್ರಿಲ್ 5 ರಂದು ಹಾಜರಾಗುವಂತೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ 3ನೇ ಬಾರಿಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.

ಮಂಗಳವಾರ ಸಮನ್ಸ್ ಜಾರಿ ಮಾಡಲಾಗಿದ್ದು, ಕಾಮ್ರಾ (36) ಅವರನ್ನು ಖಾರ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ,

ಪೊಲೀಸರು ಅವರಿಗೆ ಈ ಹಿಂದೆ ಎರಡು ಬಾರಿ ಸಮನ್ಸ್ ಜಾರಿ ಮಾಡಿದ್ದರು ಆದರೆ, ತನಿಖೆಗೆ ಹಾಜರಾಗದೆ ತನಿಖೆಗ ಸಹಕರಿಸಿದ್ದರು.

ಕುನಾಲ್ ಕಾಮ್ರಾ ಅವರು ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು.

ಉಲ್ಲೇಖಿಸಿ ದಿಲ್ ತೋ ಪಾಗಲ್ ಹೈ ಹಾಡನ್ನು ಅಣಕಿಸುವ ರೀತಿಯಲ್ಲಿ ರಾಜಕೀಯ ಪಕ್ಷಗಳನ್ನು ವಿಲೀನಗೊಳಿಸಿ ಹಾಡಿದ್ದರು. ಆದರೆ, ಕಾಮ್ರಾ ಶಿಂಧೆ ಅವರ ಹೆಸರನ್ನು ಸ್ಪಷ್ಟವಾಗಿ ಎಲ್ಲೂ ಉಲ್ಲೇಖಿಸರಲಿಲ್ಲ.

ಏಕನಾಥ್‌ ಶಿಂಧೆ - ಉದ್ದವ್ ಠಾಕ್ರೆ ನಡುವಿನ ರಾಜಕೀಯ ಉಲ್ಲೇಖಿಸುತ್ತಾ ಮೊದಲು ಶಿವಸೇನಾ ಬಿಜೆಪಿಯಿಂದ ಹೊರಬಂದಿತು, ನಂತರ ಶಿವಸೇನಾ ಶಿವಸೇನಾದಿಂದಲೇ ಹೊರಬಂದಿತು. ಎನ್‌ಸಿಪಿಯಿಂದ ಎನ್‌ಸಿಪಿ ಹೊರಬಂದಿತು. ಇವರೆಲ್ಲಾ ಒಂದು ಮತದಾರನಿಗೆ 9 ಬಟನ್‌ಗಳನ್ನು ನೀಡಿದ್ದಾರೆ. ಥಾಣೆಯು ರಾಜಕೀಯ ಭದ್ರಕೋಟೆಯಾಗಿದ್ದು, ಗದ್ದಾರ್‌ (ದ್ರೋಹಿ) ಆಳ್ವಿಕೆ ಎಂದು ಪರೋಕ್ಷವಾಗಿ ಹಾಡು ಹೇಳುತ್ತಾ ಟೀಕಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.