ದೇಶ

ಮಾತೃಭಾಷೆಯಲ್ಲೇ ವೈದ್ಯಕೀಯ ಶಿಕ್ಷಣ ಕಲಿಸಿ: ಭಾಷಾ ಸಂಘರ್ಷದ ಮಧ್ಯೆ ತಮಿಳುನಾಡು ಸರ್ಕಾರಕ್ಕೆ ಮೋದಿ ಸಲಹೆ

"ಕನಿಷ್ಠ ಪಕ್ಷ ನಿಮ್ಮ ಸಹಿಯನ್ನಾದರೂ ತಮಿಳಿನಲ್ಲಿ ಮಾಡಿ" ಎಂದು ಮೋದಿ ಹೇಳಿದರು.

ಮಾತೃಭಾಷೆಯಲ್ಲೇ ವೈದ್ಯಕೀಯ ಶಿಕ್ಷಣ ಕಲಿಸಿ: ಭಾಷಾ ಸಂಘರ್ಷದ ಮಧ್ಯೆ ತಮಿಳುನಾಡು ಸರ್ಕಾರಕ್ಕೆ ಮೋದಿ ಸಲಹೆ
ಪ್ರಧಾನಿ ನರೇಂದ್ರ ಮೋದಿ
Published On :

ರಾಮೇಶ್ವರಂ: ತಮಿಳು ಭಾಷೆಯನ್ನು ಬಲವಾಗಿ ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಭಾಷೆಯನ್ನು ಪ್ರಪಂಚದಾದ್ಯಂತ ಕೊಂಡೊಯ್ಯಲು ಎಲ್ಲಾ ಪ್ರಯತ್ನಗಳು ನಡೆಯುತ್ತಿವೆ. ಬಡವರಿಗೆ ಅನುಕೂಲವಾಗುವಂತೆ ತಮಿಳು ಮಾಧ್ಯಮದಲ್ಲೇ ವೈದ್ಯಕೀಯ ಶಿಕ್ಷಣ ನೀಡಬೇಕು ಎಂದು ಭಾನುವಾರ ತಮಿಳುನಾಡು ಸರ್ಕಾರಕ್ಕೆ ಸಲಹೆ ನೀಡಿದರು.

ಇಂದು ರಾಮನವಮಿಯ ಸಂದರ್ಭದಲ್ಲಿ ಒಟ್ಟು 8,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಮಾಡಿ ಮಾತನಾಡಿದ ಮೋದಿ, ಶ್ರೀರಾಮನ ಉತ್ತಮ ಆಡಳಿತವು ರಾಷ್ಟ್ರ ನಿರ್ಮಾಣಕ್ಕೆ ಅಡಿಪಾಯ ಎಂದು ಹೇಳಿದರು.

ಹೊಸ ಪಂಬನ್ ಸೇತುವೆಯನ್ನು ಉದ್ಘಾಟಿಸಿದ ಪ್ರಧಾನಿ ಮೋದಿ, ಇದು ದೇಶದ ಮೊದಲ ವರ್ಟಿಕಲ್ ಲಿಫ್ಟ್ ರೈಲ್ವೆ ಸಮುದ್ರ ಸೇತುವೆ ಎಂದು ಹೇಳಿದರು.

ತಮಿಳು ಭಾಷೆ, ಪರಂಪರೆಯನ್ನು ಪ್ರಪಂಚದ ಎಲ್ಲಾ ಮೂಲೆಗಳಿಗೆ ಕೊಂಡೊಯ್ಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಮೋದಿ ತಿಳಿಸಿದರು.

ಯಾರ ಹೆಸರನ್ನೂ ಪ್ರಸ್ತಾಪಿಸದೆ, ತಮಿಳುನಾಡು ನಾಯಕರಿಂದ ನನಗೆ ಹಲವು ಪತ್ರಗಳು ಬರುತ್ತವೆ. ಆದರೆ ಅವರು ಯಾರೂ ತಮಿಳಿನಲ್ಲಿ ಸಹಿ ಮಾಡುವುದಿಲ್ಲ" ಎಂದು ಮೋದಿ ಪರೋಕ್ಷವಾಗಿ ತಮಿಳುನಾಡು ಸರ್ಕಾರಕ್ಕೆ ಟಾಂಗ್ ನೀಡಿದರು.

"ಕನಿಷ್ಠ ಪಕ್ಷ ನಿಮ್ಮ ಸಹಿಯನ್ನಾದರೂ ತಮಿಳಿನಲ್ಲಿ ಮಾಡಿ" ಎಂದು ಮೋದಿ ಹೇಳಿದರು.

ಇದಲ್ಲದೆ, ಬಡ ಕುಟುಂಬಗಳ ವಿದ್ಯಾರ್ಥಿಗಳಿಗೆ ಪ್ರಯೋಜನವಾಗುವಂತೆ ರಾಜ್ಯದಲ್ಲಿ ತಮಿಳು ಮಾಧ್ಯಮದಲ್ಲಿ ವೈದ್ಯಕೀಯ ಶಿಕ್ಷಣವನ್ನು ಕಲಿಸಬೇಕೆಂದು ಅವರು ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.