ದೇಶ

ಉತ್ತರ ಪ್ರದೇಶ: ಬುಲ್ಡೋಜರ್‌ನೊಂದಿಗೆ ಅಂಬೇಡ್ಕರ್, ಬುದ್ಧನ ಪ್ರತಿಮೆ ತೆರವು; ಉದ್ವಿಗ್ನತೆ, 8 ಪೊಲೀಸರಿಗೆ ಗಾಯ

ಅಧಿಕಾರಿಗಳ ಪ್ರಕಾರ, ಮಾರ್ಚ್ 11 ರಂದು ಪಂಚಾಯತ್ ಭವನದ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಮೆ ಪ್ರತಿಷ್ಠಾಪಿಸಿದ್ದರು.

ಉತ್ತರ ಪ್ರದೇಶ: ಬುಲ್ಡೋಜರ್‌ನೊಂದಿಗೆ ಅಂಬೇಡ್ಕರ್, ಬುದ್ಧನ ಪ್ರತಿಮೆ ತೆರವು; ಉದ್ವಿಗ್ನತೆ, 8 ಪೊಲೀಸರಿಗೆ ಗಾಯ
ಬುಲ್ಡೋಜರ್‌ನೊಂದಿಗೆ ಪ್ರತಿಮೆ ತೆರವುಗೊಳಿಸುತ್ತಿರುವ ಪೊಲೀಸರು
Published On :

ಸೀತಾಪುರ: ಸರ್ಕಾರಿ ಭೂಮಿಯಲ್ಲಿದ್ದ ಬಿ.ಆರ್. ಅಂಬೇಡ್ಕರ್ ಹಾಗೂ ಭಗವನ್ ಬುದ್ಧನ ಪ್ರತಿಮೆ ತೆರವು ವಿಚಾರದಲ್ಲಿ ಗ್ರಾಮಸ್ಥರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಉತ್ತರ ಪ್ರದೇಶ ಜಿಲ್ಲೆಯ ವಿಭಾರಾಪುರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಗ್ರಾಮಸ್ಥರು ಕಲ್ಲು ತೂರಾಟ ನಡೆಸಿ ಘರ್ಷಣೆ ನಡೆಸಿದ್ದರಿಂದ ಕನಿಷ್ಠ ಎಂಟು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಮಾರ್ಚ್ 11 ರಂದು ಪಂಚಾಯತ್ ಭವನದ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಮೆ ಪ್ರತಿಷ್ಠಾಪಿಸಿದ್ದರು. ದೂರಿನ ಮೇರೆಗೆ ತಹಸಿಲ್ ಆಡಳಿತ ಮಾರ್ಚ್ 12 ರಂದು ಪ್ರತಿಮೆಗೆ ತೆರವಿಗೆ ನೋಟಿಸ್ ನೀಡಿತ್ತು.

ಆದರೆ, ಗ್ರಾಮಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರತಿಮೆಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿತ್ತು. ಶನಿವಾರ ಮಹೋಲಿಯಲ್ಲಿ ನಡೆದ ಕುಂದುಕೊರತೆ ನಿವಾರಣಾ ಕಾರ್ಯಕ್ರಮದಲ್ಲಿ ಈ ವಿಷಯ ಮರುಕಳಿಸಿದೆ.

ಹೊಸ ಸೂಚನೆಗಳ ಮೇರೆಗೆ ತಂಡವೊಂದು ಬುಲ್ಡೋಜರ್‌ನೊಂದಿಗೆ ವಿವಾದಿತ ಸ್ಥಳದಿಂದ ಪ್ರತಿಮೆಗಳನ್ನು ತೆರವುಗೊಳಿಸಿದೆ. ಪೊಲೀಸರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಪ್ರತಿಮೆ ತೆರವಿಗೆ ಸಜ್ಜಾಗುತ್ತಿದ್ದಂತೆೇ ಅವರತ್ತ ಗ್ರಾಮಸ್ಥರ ಗುಂಪೊಂದು ಕಲ್ಲು ತೂರಾಟಕ್ಕೆ ಮುಂದಾಗಿದೆ.

ಘಟನೆಯಲ್ಲಿ ಎಂಟು ಪೊಲೀಸರಿಗೆ ಗಾಯವಾಗಿದ್ದು, ಸರ್ಕಲ್ ಅಧಿಕಾರಿಯ ವಾಹನಕ್ಕೆ ಹಾನಿಯಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಗಲಾಟೆ ವೇಳೆ ಕೆಲ ಗ್ರಾಮಸ್ಥರು ಕೂಡಾ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ರಂಜನ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ತೊಡಗಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇತರ ಆರೋಪಿಗಳ ಬಂಧನಕ್ಕಾಗಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.