ದೇಶ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಮದರಸಾ ಶಿಕ್ಷಕನಿಗೆ 187 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!

ತಲಿಪರಂಬ ಪೋಕ್ಸೋ ನ್ಯಾಯಾಲಯು ಮಂಗಳವಾರ ಈ ಮಹತ್ವದ ತೀರ್ಪು ನೀಡಿದೆ.

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕೇರಳದ ಮದರಸಾ ಶಿಕ್ಷಕನಿಗೆ 187 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್!
ಮದರಸಾ
Published On :

ಕಣ್ಣೂರು: ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ 16 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕೇರಳದ ಕಣ್ಣೂರಿನ ಮದರಸಾ ಶಿಕ್ಷಕನೊಬ್ಬನಿಗೆ ಕೋರ್ಟ್ ಬರೋಬ್ಬರಿ 187 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ತಲಿಪರಂಬ ಪೋಕ್ಸೋ ನ್ಯಾಯಾಲಯು ಮಂಗಳವಾರ ಈ ಮಹತ್ವದ ತೀರ್ಪು ನೀಡಿದೆ.

ಪಬ್ಲಿಕ್ ಪ್ರಾಸಿಕ್ಯೂಟರ್ ವಕೀಲ ಶೆರಿಮೋಲ್ ಜೋಸ್ ಅವರ ಪ್ರಕಾರ, ಅಳಕೋಡ್ ಮೂಲದ ಮೊಹಮ್ಮದ್ ರಫಿ ಈ ಪೋಕ್ಸೋ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು, ನ್ಯಾಯಾಲಯವು 9 ಲಕ್ಷ ರೂ. ದಂಡವನ್ನೂ ವಿಧಿಸಿದೆ.

ಆರೋಪಿಯು ಈ ಹಿಂದೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯಡಿ ಮತ್ತೊಂದು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬುದನ್ನು ನ್ಯಾಯಾಲಯ ಗಣನೆಗೆ ತೆಗೆದುಕೊಂಡಿದೆ ಎಂದು ವಕೀಲ ಜೋಸ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.