ದೇಶ ವಿರೋಧಿ ಚಟುವಟಿಕೆ: ಮತ್ತೆ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್
ಸಂವಿಧಾನದ 311ನೇ ವಿಧಿಯನ್ನು ಅನ್ವಯಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಸಹಾಯಕ ವೈರ್ಲೆಸ್ ಆಪರೇಟರ್ ಆಗಿದ ಬಷರತ್ ಅಹ್ಮದ್ ಮಿರ್ ಮತ್ತು ಸಾರ್ವಜನಿಕ ಕಾರ್ಯ(ಆರ್ & ಬಿ) ಇಲಾಖೆಯಲ್ಲಿ ಹಿರಿಯ ಸಹಾಯಕರಾಗಿದ್ದ ಇಶ್ತಿಯಾಕ್ ಅಹ್ಮದ್ ಮಲಿಕ್ ಅವರನ್ನು ವಜಾಗೊಳಿಸಿದ್ದಾರೆ.

ಶ್ರೀನಗರ: ದೇಶ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಗುರುವಾರ ಇಬ್ಬರು ಸರ್ಕಾರಿ ನೌಕರರನ್ನು ಸೇವೆಯಿಂದ ವಜಾಗೊಳಿಸಿದ್ದಾರೆ.
ಸಿನ್ಹಾ ಅವರು ಸಂವಿಧಾನದ 311ನೇ ವಿಧಿಯನ್ನು ಅನ್ವಯಿಸುವ ಮೂಲಕ ಪೊಲೀಸ್ ಇಲಾಖೆಯಲ್ಲಿ ಸಹಾಯಕ ವೈರ್ಲೆಸ್ ಆಪರೇಟರ್ ಆಗಿದ ಬಷರತ್ ಅಹ್ಮದ್ ಮಿರ್ ಮತ್ತು ಸಾರ್ವಜನಿಕ ಕಾರ್ಯ(ಆರ್ & ಬಿ) ಇಲಾಖೆಯಲ್ಲಿ ಹಿರಿಯ ಸಹಾಯಕರಾಗಿದ್ದ ಇಶ್ತಿಯಾಕ್ ಅಹ್ಮದ್ ಮಲಿಕ್ ಅವರನ್ನು ವಜಾಗೊಳಿಸಿದ್ದಾರೆ.
"ಈ ಇಬ್ಬರು ನೌಕರರು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದಾರೆ ಎಂಬುದು ಕಾನೂನು ಜಾರಿ ಮತ್ತು ಗುಪ್ತಚರ ಸಂಸ್ಥೆಗಳ ಗಮನಕ್ಕೆ ಬಂದಿದೆ. ಇದು ಭಯೋತ್ಪಾದನೆಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಅವರ ಪಾಲ್ಗೊಳ್ಳುವಿಕೆಯನ್ನು ಸಾಬೀತುಪಡಿಸುತ್ತದೆ" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಶ್ರೀನಗರದ ನಿವಾಸಿ ಬಷರತ್ ಅಹ್ಮದ್ ಮಿರ್ ಪಾಕಿಸ್ತಾನ ಗುಪ್ತಚರ ಕಾರ್ಯಕರ್ತರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಏಜೆನ್ಸಿಗಳಿಂದ ಬಂದ ಹೆಚ್ಚು ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ವಜಾಗೊಳಿಸಲಾದ ಮತ್ತೊಬ್ಬ ಉದ್ಯೋಗಿ, ದಕ್ಷಿಣ ಕಾಶ್ಮೀರದ ಅನಂತ್ನಾಗ್ ನಿವಾಸಿ ಇಶ್ತಿಯಾಕ್ ಅಹ್ಮದ್ ಮಲಿಕ್, ನಿಷೇಧಿತ ಕಾನೂನುಬಾಹಿರ ಸಂಘಟನೆಯಾದ ಜಮಾತ್-ಇ-ಇಸ್ಲಾಮಿಯ ಜಮ್ಮು ಮತ್ತು ಕಾಶ್ಮೀರ ಸಕ್ರಿಯ ಸದಸ್ಯ ಮತ್ತು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ನ ಸಹಚರ ಎಂದು ಪಟ್ಟಿ ಮಾಡಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



