ಮುಂದಿನ ಪುನಾರಚನೆಯಲ್ಲಿ ಮೋದಿ ಸಚಿವ ಸಂಪುಟದಲ್ಲಿ ಪಸ್ಮಾಂಡ ಮುಸ್ಲಿಂ ಸಮುದಾಯದ ನಾಯಕನಿಗೆ ಸ್ಥಾನ?
ಸದ್ಯ ಬಿಜೆಪಿಯಲ್ಲಿ ಇಬ್ಬರು ಪ್ರಮುಖ ಮುಸ್ಲಿಂ ಮುಖಂಡರಿದ್ದಾರೆ. ರಾಜ್ಯಸಭಾ ಸಂಸದ ಗುಲಾಮ್ ಅಲಿ ಖತಾನಾ ಮತ್ತು ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ.

ನವದೆಹಲಿ: ಕೇಂದ್ರ ಸಚಿವ ಸಂಪುಟದಲ್ಲಿ ಮುಸ್ಲಿಂ ಸಮುದಾಯದ ಸಚಿವರ ಕೊರತೆಯ ಬಗ್ಗೆ ವಿರೋಧ ಪಕ್ಷಗಳು ತೀವ್ರ ಟೀಕೆ ಮಾಡುತ್ತಿವೆ. ಈ ನಡುವೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮೇ ಮತ್ತು ಜುಲೈ ನಡುವೆ ನಡೆಯಲಿರುವ ಸಂಪುಟ ಪುನಾರಚನೆಯಲ್ಲಿ ಈ ತಾರತಮ್ಯ ಸರಿಪಡಿಸಲು ಎದುರು ನೋಡುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್ ಎಂಬ ತಮ್ಮ ಆಡಳಿತ ಮಂತ್ರಕ್ಕೆ ಅನುಗುಣವಾಗಿ ಪಾಸ್ಮಾಂಡ ಸಮುದಾಯದ ಮುಸ್ಲಿಂ ಸದಸ್ಯರನ್ನು ಸೇರಿಸಿಕೊಳ್ಳುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದ್ದಾರೆ ಎಂದು ಪಕ್ಷದ ಮೂಲಗಳು ಸೂಚಿಸಿವೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದಲ್ಲಿ ರಾಜ್ಯ ಸಚಿವರ ಮಟ್ಟದಲ್ಲಿ ಸೇರ್ಪಡೆಗೊಳ್ಳುವ ನಿರೀಕ್ಷೆಯಿದೆ.
ಸದ್ಯ ಬಿಜೆಪಿಯಲ್ಲಿ ಇಬ್ಬರು ಪ್ರಮುಖ ಮುಸ್ಲಿಂ ಮುಖಂಡರಿದ್ದಾರೆ. ರಾಜ್ಯಸಭಾ ಸಂಸದ ಗುಲಾಮ್ ಅಲಿ ಖತಾನಾ ಮತ್ತು ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ. ಸಿದ್ದಿಕಿ ಅವರನ್ನು ಸೇರಿಸಿಕೊಂಡರೆ, ಅವರಿಗೆ ತರುವಾಯ ರಾಜ್ಯಸಭಾ ಟಿಕೆಟ್ ಸಿಗಬಹುದು. ಸಿದ್ದಿಕಿ ಮಹಾರಾಷ್ಟ್ರದವರಾಗಿದ್ದರೆ, ಖತಾನಾ ಜಮ್ಮು ಮತ್ತು ಕಾಶ್ಮೀರದವರು.
ಆಯ್ಕೆಯಾದವರು ಪಾಸ್ಮಾಂಡ ವರ್ಗದಿಂದ ಬಂದವರಾಗಿರುತ್ತಾರೆ, ಸಮುದಾಯವನ್ನು ರಾಷ್ಟ್ರೀಯ ಮುಖ್ಯವಾಹಿನಿಗೆ ತರುವ ಬಗ್ಗೆ ಪ್ರಧಾನಿ ಒತ್ತು ನೀಡುತ್ತಾರೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಮೇ ಎರಡನೇ ವಾರದೊಳಗೆ ಪಕ್ಷವು ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದ ನಂತರ ಸಂಪುಟ ಪುನರ್ರಚನೆ ಬಗ್ಗೆ ಗಮನ ಹರಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



