ದೇಶ

ಸಿಂಗಾಪುರದಲ್ಲಿ ಬೆಂಕಿ ಅವಘಡ: ಮಗನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪವನ್ ಕಲ್ಯಾಣ್

ಏಪ್ರಿಲ್ 8 ರಂದು ಸಿಂಗಾಪುರದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿಯೊಬ್ಬರು ಮೃತಪಟ್ಟಿದ್ದರು ಮತ್ತು ಶಂಕರ್ ಸೇರಿದಂತೆ 20 ಮಂದಿ ಗಾಯಗೊಂಡಿದ್ದರು.

ಸಿಂಗಾಪುರದಲ್ಲಿ ಬೆಂಕಿ ಅವಘಡ: ಮಗನ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಪವನ್ ಕಲ್ಯಾಣ್
ಪವನ್ ಕಲ್ಯಾಣ್
Published On :

ಅಮರಾವತಿ: ಸಿಂಗಾಪುರದ ಬೇಸಿಗೆ ಶಿಬಿರದಲ್ಲಿ ಇತ್ತೀಚೆಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ತಮ್ಮ ಮಗ ಮಾರ್ಕ್ ಶಂಕರ್ ಈಗ ಸ್ಥಿರವಾಗಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಭಾನುವಾರ ಹೇಳಿದ್ದಾರೆ.

'ಸಿಂಗಾಪುರದಲ್ಲಿ ನಡೆದ ದುರದೃಷ್ಟಕರ ಘಟನೆಯ ನಂತರ ನನ್ನ ಮಗ ಶಂಕರ್ ಸ್ಥಿರವಾಗಿದ್ದಾನೆ ಮತ್ತು ಚೇತರಿಸಿಕೊಳ್ಳುತ್ತಿದ್ದಾನೆ. ಅವನು ಚೇತರಿಸಿಕೊಳ್ಳುವಂತೆ ಪ್ರಾರ್ಥನೆ, ಕಾಳಜಿ ಮತ್ತು ಬೆಂಬಲ ನೀಡಿದ ಎಲ್ಲರಿಗೂ ನಾನು ಪ್ರಾಮಾಣಿಕವಾಗಿ ಧನ್ಯವಾದ ಹೇಳುತ್ತೇನೆ' ಎಂದು ಪವನ್ ಕಲ್ಯಾಣ್ 'X' ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಏಪ್ರಿಲ್ 8 ರಂದು ಸಿಂಗಾಪುರದ ಕಟ್ಟಡವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿಯೊಬ್ಬರು ಮೃತಪಟ್ಟಿದ್ದರು ಮತ್ತು ಶಂಕರ್ ಸೇರಿದಂತೆ 20 ಮಂದಿ ಗಾಯಗೊಂಡಿದ್ದರು.

ಕಠಿಣ ಸಂದರ್ಭದಲ್ಲಿ ನಮ್ಮ ಕುಟುಂಬಕ್ಕೆ ಬೆಂಬಲವಾಗಿ ನಿಂತ ಪ್ರಧಾನಿ ನರೇಂದ್ರ ಮೋದಿ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸೇರಿದಂತೆ ಇತರರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.