ಟಿವಿ ಸಂದರ್ಶನದಲ್ಲಿ ಪ್ರಧಾನಿ ಮೋದಿ, RSS ನಿಂದನೆ ಆರೋಪ: ಕನ್ಹಯ್ಯಾ ಕುಮಾರ್ ವಿರುದ್ಧ ಪೊಲೀಸರಿಗೆ BJP ದೂರು
ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ.

ಪಾಟ್ನಾ: ಇತ್ತೀಚಿಗೆ ಟಿವಿ ಸಂದರ್ಶನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ವಿರುದ್ಧ ನಿಂದನಾತ್ಮಕ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ಕನ್ಹಯ್ಯಾ ಕುಮಾರ್ ವಿರುದ್ಧ ಬಿಜೆಪಿ ಶನಿವಾರ ಪಾಟ್ನಾದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.
ಬಿಹಾರದ ಬಿಜೆಪಿಯ ಮಾಧ್ಯಮ ಉಸ್ತುವಾರಿ ಡ್ಯಾನಿಶ್ ಇಕ್ಬಾಲ್ ನೇತೃತ್ವದ ನಿಯೋಗ ಕೊತ್ವಾಲಿ ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದೆ. ಹೇಳಿಕೆಗಳ ಕುರಿತು ಕನ್ಹಯ್ಯಾ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಇಕ್ಬಾಲ್ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಏಪ್ರಿಲ್ 11 ರಂದು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ 'ತುಕ್ಡೆ ತುಕ್ಡೆ ಗ್ಯಾಂಗ್'ನ ಭಾಗವಾಗಿರುವ ಕನ್ಹಯ್ಯಾ ಕುಮಾರ್, ಪ್ರಧಾನಿ ಮೋದಿ ಮತ್ತು ಆರ್‌ಎಸ್‌ಎಸ್ ಮತ್ತು ಅದರ ಸಿದ್ಧಾಂತಗಳ ವಿರುದ್ಧ ನಿಂದನೀಯ ಭಾಷೆಯನ್ನು ಬಳಸಿದ್ದಾರೆ.
ಸಂದರ್ಶನದಲ್ಲಿ ಅವರು ಬಳಸಿರುವ ಭಾಷೆ ಅತ್ಯಂತ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲ ಎಂದು ಇಕ್ಬಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ಹಯ್ಯಾ ಕುಮಾರ್ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



