ದೇಶ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್, ಸ್ಯಾಮ್ ಪಿತ್ರೋಡಾ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ

ನ್ಯಾಯಾಲಯವು ಇದೇ ಏಪ್ರಿಲ್ 25 ರಂದು ವಿಚಾರಣೆ ನಿಗದಿಪಡಿಸಿದೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ, ರಾಹುಲ್, ಸ್ಯಾಮ್ ಪಿತ್ರೋಡಾ ವಿರುದ್ಧ ED ಚಾರ್ಜ್ ಶೀಟ್ ಸಲ್ಲಿಕೆ
ಸೋನಿಯಾ ಗಾಂಧಿ-ರಾಹುಲ್ ಗಾಂಧಿ — PTI
Published On :

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಅವರ ತಾಯಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಾಗರೋತ್ತರ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವಿರುದ್ಧ ಜಾರಿ ನಿರ್ದೇಶನಾಲಯ ಮಂಗಳವಾರ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ.

ಇಡಿ ಅಧಿಕಾರಿಗಳು ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಆರೋಪಪಟ್ಟಿಯಲ್ಲಿ ಸುಮನ್ ದುಬೆ ಮತ್ತು ಇತರರ ಹೆಸರುಗಳಿವೆ.

ನ್ಯಾಯಾಲಯವು ಇದೇ ಏಪ್ರಿಲ್ 25 ರಂದು ವಿಚಾರಣೆ ನಿಗದಿಪಡಿಸಿದೆ.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ ಖಾಸಗಿ ದೂರಿನ ಆಧಾರದ ಮೇಲೆ ನ್ಯಾಷನಲ್​ ಹೆರಾಲ್ಡ್​ ಪ್ರಕರಣ ದಾಖಲಾಗಿದ್ದು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಯಂಗ್ ಇಂಡಿಯನ್ ಪ್ರೈವೇಟ್ ಲಿಮಿಟೆಡ್ ಮೂಲಕ 2000 ಕೋಟಿ ರೂ. ಮೌಲ್ಯದ ಎಜೆಎಲ್ ಆಸ್ತಿಗಳನ್ನು ಕೇವಲ 50 ಲಕ್ಷ ರೂ.ಗಳಿಗೆ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಇಡಿ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.