ಜಮ್ಮು-ಕಾಶ್ಮೀರದ ಪೂಂಚ್‌ನಲ್ಲಿ ಗುಂಡಿನ ಚಕಮಕಿ; ಸೇನಾ ಸಿಬ್ಬಂದಿಗೆ ಗಾಯ
ಕಳೆದ ರಾತ್ರಿ ಸುರಂಕೋಟ್‌ನ ಲಸಾನಾದಲ್ಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಮಂಗಳವಾರ ನಸುಕಿನ ಜಾವ ಗುಂಡಿನ ಚಕಮಕಿ ನಡೆದಿದೆ.
ಭಯೋತ್ಪಾದಕರ ಚಲನವಲನ ಬಗ್ಗೆ ಮಾಹಿತಿ ಬಂದ ನಂತರ ಭದ್ರತಾ ಪಡೆಗಳು ನಿನ್ನೆ ಸೋಮವಾರ ರಾತ್ರಿ ಸುರಂಕೋಟ್‌ನ ಲಸಾನಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ರಾತ್ರಿ ಸುರಂಕೋಟ್‌ನ ಲಸಾನಾದಲ್ಲಿ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರ ಚಟುವಟಿಕೆ ಬಗ್ಗೆ ಮಾಹಿತಿ ಸಿಕ್ಕಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಯಿತು.
ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಶೋಧ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಸೇನೆಯ ಜಮ್ಮು ಮೂಲದ ವೈಟ್ ನೈಟ್ ಕಾರ್ಪ್ಸ್ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದೆ. ಗುಂಡಿನ ದಾಳಿಯಲ್ಲಿ ಒಬ್ಬ ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


