ಕೈಲಾಸ ಮಾನಸ ಸರೋವರ ಯಾತ್ರೆ ಶೀಘ್ರ ಪುನರಾರಂಭ: ಭಾರತ
ಸಂಬಂಧಗಳನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.

ನವದೆಹಲಿ: ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಶೀಘ್ರದಲ್ಲೇ ಪುನರಾರಂಭಿಸುವ ಸಾಧ್ಯತೆ ಇದೆ ಮತ್ತು ಅದರ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗುವುದು ಎಂದು ಗುರುವಾರ ಕೇಂದ್ರ ಸರ್ಕಾರ ಹೇಳಿದೆ.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಹಿ ಹಾಕಲಾದ ಒಪ್ಪಂದದ ಚೌಕಟ್ಟಿನಡಿಯಲ್ಲಿ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನದ ಭಾಗವಾಗಿ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ.
"ಕೈಲಾಸ ಮಾನಸ ಸರೋವರ ಯಾತ್ರೆಯ ಕುರಿತು ನಾವು ಶೀಘ್ರದಲ್ಲೇ ಸಾರ್ವಜನಿಕ ಪ್ರಕಟಣೆ ಹೊರಡಿಸುತ್ತೇವೆ ಮತ್ತು ಶೀಘ್ರದಲ್ಲೇ ಯಾತ್ರೆಯನ್ನು ಪುನರಾರಂಭಿಸುವ ಸಾಧ್ಯತೆಯಿದೆ" ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಹೇಳಿದ್ದಾರೆ.
"ಈ ವರ್ಷ ಯಾತ್ರೆ ನಡೆಯಲಿದೆ ಮತ್ತು ನಾವು ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ. ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಸಾರ್ವಜನಿಕರಿಗೆ ತಿಳಿಸುತ್ತೇವೆ" ಎಂದು ಅವರು ಹೇಳಿದ್ದಾರೆ.
2020ರ ಕೋವಿಡ್ ಬಳಿಕ ಟಿಬೆಟ್‌ನ ಕೈಲಾಸ ಪರ್ವತ ಮತ್ತು ಮಾನಸ ಸರೋವರಕ್ಕೆ ಭೇಟಿ ನೀಡುವ ಈ ಯಾತ್ರೆಯನ್ನು ಏಕಾಏಕಿ ಸ್ಥಗಿತಗೊಳಿಸಲಾಗಿತ್ತು. ಅಲ್ಲದೇ ಗಲ್ವಾನ್ ಘರ್ಷಣೆಯ ಬಳಿಕ ಬೀಜಿಂಗ್ ಮತ್ತು ನವದೆಹಲಿ ನಡುವಿನ ಮುನಿಸು ಮತ್ತೆ ಮುಂದುವರಿದಿತ್ತು. ಇದೀಗ ದ್ವಿಪಕ್ಷೀಯ ಸಂಬಂಧವನ್ನು ಉತ್ತಮಗೊಳಿಸಲು ಭಾರತ ಹಾಗೂ ಚೀನಾ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ನಿರ್ಧರಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



