ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಭಾರತಕ್ಕೆ ಭೇಟಿ; ಆಗ್ರಾದಲ್ಲಿ ಯುಪಿ ಸಿಎಂ ಯೋಗಿ ಸ್ವಾಗತ
ಅಮೆರಿಕದ ಉಪಾಧ್ಯಕ್ಷರು ಏಪ್ರಿಲ್ 21ರ ಸೋಮವಾರ ರಾತ್ರಿ ಜೈಪುರಕ್ಕೆ ಆಗಮಿಸಲಿದ್ದಾರೆ.

ಲಖನೌ: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಅವರು ತಮ್ಮ ಪತ್ನಿ ಉಷಾ ವ್ಯಾನ್ಸ್ ಮತ್ತು ಮಕ್ಕಳೊಂದಿಗೆ ಏಪ್ರಿಲ್ 21 ರಿಂದ ನಾಲ್ಕು ದಿನಗಳ ಭಾರತ ಭೇಟಿಗೆ ಆಗಮಿಸುತ್ತಿದ್ದಾರೆ. ವ್ಯಾನ್ಸ್ ಅವರು ದೆಹಲಿಯಲ್ಲಿ ರಾಜಕೀಯ ಸಭೆಗಳಲ್ಲಿ ಭಾಗವಹಿಸುವ ಮೊದಲು ಕುಟುಂಬದೊಂದಿಗೆ ಭಾರತದ ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
ಅಮೆರಿಕದ ಉಪಾಧ್ಯಕ್ಷರು ಏಪ್ರಿಲ್ 21ರ ಸೋಮವಾರ ರಾತ್ರಿ ಜೈಪುರಕ್ಕೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾಲ ರಾಜಸ್ಥಾನದ ಸಾಂಸ್ಕೃತಿಕ ಶ್ರೀಮಂತಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡ ನಂತರ, ವ್ಯಾನ್ಸ್ ಮತ್ತು ಅವರ ಕುಟುಂಬವು ಏಪ್ರಿಲ್ 23 ರಂದು ಆಗ್ರಾಗೆ ಭೇಟಿ ನೀಡಿ ಪ್ರೀತಿಯ ಸ್ಮಾರಕ ತಾಜ್ ಮಹಲ್‌ನ ಸೌಂದರ್ಯವನ್ನು ವೀಕ್ಷಿಸಲಿದ್ದಾರೆ. ನಂತರ ಅಮೆರಿಕದ ಉಪಾಧ್ಯಕ್ಷರು ದ್ವಿಪಕ್ಷೀಯ ಮಾತುಕತೆಗಾಗಿ ದೆಹಲಿಗೆ ತೆರಳಲಿದ್ದಾರೆ.
ಮೂಲಗಳ ಪ್ರಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ಆಗ್ರಾ ಜಿಲ್ಲಾಡಳಿತವು ಅಮೆರಿಕದ ಉಪಾಧ್ಯಕ್ಷರ ಭೇಟಿಗೆ ಸಿದ್ಧತೆ ನಡೆಸುತ್ತಿದೆ.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಆಗ್ರಾದಲ್ಲಿ ಅಮೆರಿಕದ ಉಪಾಧ್ಯಕ್ಷರನ್ನು ಸ್ವಾಗತಿಸುವ ಸಾಧ್ಯತೆಯಿದೆ. ಗಣ್ಯರ ಭೇಟಿಯ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡಲು ಯುಪಿ ಪ್ರವಾಸೋದ್ಯಮ ಸಚಿವ ರಾಜವೀರ್ ಸಿಂಗ್ ಈಗಾಗಲೇ ಆಗ್ರಾದಲ್ಲಿದ್ದಾರೆ.
ಅಮೆರಿಕ ಉಪಾಧ್ಯಕ್ಷರ ಭೇಟಿಗೂ ಮುನ್ನ ಏಪ್ರಿಲ್ 22, ಮಂಗಳವಾರ ಆಗ್ರಾದಲ್ಲಿ ಯುಎಸ್ ಕಮಾಂಡೋ ಪಡೆಯ ವಿಶೇಷ ತುಕಡಿ ಲ್ಯಾಂಗ್ ಆಗುವ ನಿರೀಕ್ಷೆಯಿದೆ. ಇದಲ್ಲದೆ, ಭದ್ರತೆ ದೃಷ್ಟಿಯಿಂದ ವ್ಯಾನ್ಸ್ ಭೇಟಿಗೆ ಮೂರು ಗಂಟೆಗಳ ಮೊದಲು ತಾಜ್ ಮಹಲ್ ಅನ್ನು ಸಾರ್ವಜನಿಕರಿಗೆ ಬಂದ್ ಮಾಡಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



