ಮಹಾರಾಷ್ಟ್ರದಲ್ಲಿ ಹಿಂದಿ ಕಡ್ಡಾಯಗೊಳಿಸಲು ಬಿಡುವುದಿಲ್ಲ: ಉದ್ಧವ್ ಠಾಕ್ರೆ
ಮಹಾರಾಷ್ಟ್ರದಾದ್ಯಂತ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯನ್ನಾಗಿ ಮಾಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.

ಮುಂಬೈ: 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ ನಂತರ, ಮಹಾರಾಷ್ಟ್ರದಲ್ಲಿ ಹಿಂದಿ ಕಡ್ಡಾಯಗೊಳಿಸಲು ತಮ್ಮ ಪಕ್ಷವು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಶನಿವಾರ ಹೇಳಿದ್ದಾರೆ.
ಶಿವಸೇನೆ(ಯುಬಿಟಿ) ಕಾರ್ಮಿಕರ ವಿಭಾಗವಾದ ಭಾರತೀಯ ಕಾಮಗರ್ ಸೇನೆಯ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಠಾಕ್ರೆ, ತಮ್ಮ ಪಕ್ಷಕ್ಕೆ ಹಿಂದಿ ಭಾಷೆಯ ಬಗ್ಗೆ ಯಾವುದೇ ದ್ವೇಷವಿಲ್ಲ. ಆದರೆ ಅದನ್ನು ಬಲವಂತವಾಗಿ ಏಕೆ ನಮ್ಮ ಮೇಲೆ ಹೇರಲಾಗುತ್ತಿದೆ ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರದಾದ್ಯಂತ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಕಡ್ಡಾಯ ಭಾಷೆಯನ್ನಾಗಿ ಮಾಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರದ ಬಗ್ಗೆ ವಿರೋಧ ಪಕ್ಷಗಳ ಆಕ್ರೋಶದ ನಡುವೆ ಮಾಜಿ ಸಿಎಂ ಠಾಕ್ರೆ ಅವರು ಈ ಹೇಳಿಕೆ ನೀಡಿದ್ದಾರೆ.
ಈ ಕ್ರಮವು ರಾಷ್ಟ್ರೀಯ ಶಿಕ್ಷಣ ನೀತಿ(NEP)ಗೆ ಅನುಗುಣವಾಗಿದೆ, ಇದನ್ನು ರಾಜ್ಯಾದ್ಯಂತ ಹಂತ ಹಂತವಾಗಿ ಜಾರಿಗೆ ತರಲಾಗುತ್ತಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು, ರಾಜ್ಯವು ಈಗಾಗಲೇ NEP ಅನ್ನು ಅಳವಡಿಸಿಕೊಂಡಿದೆ. ಮರಾಠಿ ಭಾಷೆಯನ್ನು ಈಗಾಗಲೇ ಕಡ್ಡಾಯಗೊಳಿಸಲಾಗಿದೆ. ಹಿಂದಿ ಭಾಷೆಯನ್ನು ಸಹ ಕಲಿಯಬೇಕು. ಏಕೆಂದರೆ ಅದು ಇಡೀ ದೇಶಾದ್ಯಂತ ಸಂವಹನ ಸಾಧನವಾಗಿದೆ" ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



