ದೇಶ

ಮಣಿಪುರದಲ್ಲಿ 16 ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ

ಬಂಧಿತ ಉಗ್ರರು ಸುಲಿಗೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ 16 ಉಗ್ರರ ಬಂಧನ, ಶಸ್ತ್ರಾಸ್ತ್ರ ವಶ
ಮಣಿಪುರ
Published On :

ಇಂಫಾಲ್: ಮಣಿಪುರದಲ್ಲಿ ಕಳೆದ 48 ಗಂಟೆಗಳಲ್ಲಿ ಹಲವಾರು ನಿಷೇಧಿತ ಸಂಘಟನೆಗಳ ಒಟ್ಟು 16 ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ನಿಷೇಧಿತ ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್(ಪಂಬೈ)ನ ಇಬ್ಬರು ಕಾರ್ಯಕರ್ತರನ್ನು ಇಂಫಾಲ್ ಪೂರ್ವ ಜಿಲ್ಲೆಯ ನೊಂಗ್‌ಡ್ಯಾಮ್ ಗ್ರಾಮದ ಬಳಿಯ ನಾಪೆಟ್‌ಪಲ್ಲಿ ಆಂಡ್ರೊ ರಸ್ತೆಯಲ್ಲಿ ಶನಿವಾರ ಬಂಧಿಸಲಾಗಿದೆ.

ಬಂಧಿತ ಉಗ್ರರು ಸುಲಿಗೆಯಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಷ್ಣುಪುರ ಜಿಲ್ಲೆಯ ನಿಂಗ್‌ಥೌಖೋಂಗ್ ವಾರ್ಡ್ ಸಂಖ್ಯೆ 13 ರಿಂದ ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಕ್ಷದ (ತೈಬಂಗನ್ಬಾ) ಒಬ್ಬ ಸದಸ್ಯನನ್ನು ಭದ್ರತಾ ಪಡೆಗಳು ಶುಕ್ರವಾರ ಬಂಧಿಸಿವೆ ಎಂದು ಅವರು ಹೇಳಿದ್ದಾರೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಸಲಾಮ್ ಮಾಮಾಂಗ್ ಲೀಕೈ ಕೇತುಕಿ ಲ್ಯಾಂಪಕ್‌ನಿಂದ ನಿಷೇಧಿತ ಕೆಸಿಪಿ(ಎಂಎಫ್‌ಎಲ್)ನ ಇಬ್ಬರು ಸದಸ್ಯರನ್ನು ಅದೇ ದಿನ ಬಂಧಿಸಲಾಗಿದೆ. ಅವರು ಸಹ ಸುಲಿಗೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ರಾಜ್ಯ ಪೊಲೀಸರು ಶುಕ್ರವಾರ ಇಂಫಾಲ್ ಪೂರ್ವ ಜಿಲ್ಲೆಯ ಕ್ಯಾಮ್‌ಗೆಯ್ ಹೈಬಾಂಗ್ ಮಖೋಂಗ್ ಪ್ರದೇಶದಿಂದ ನಿಷೇಧಿತ ಪ್ರೆಪಾಕ್(ಪಿಆರ್‌ಒ)ನ ಒಬ್ಬ ಕಾರ್ಯಕರ್ತನನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.