ರಾಕಿಂಗ್ ಸ್ಟಾರ್ Yash- ಮಧ್ಯ ಪ್ರದೇಶ CM ಮೋಹನ್ ಯಾದವ್ ಭೇಟಿ; ಕುತೂಹಲ!
ಈ ಬೆನ್ನಲ್ಲೇ ಭೋಪಾಲ್ ನಲ್ಲಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಯಶ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.

ಭೋಪಾಲ್: ರಾಕಿಂಗ್ ಸ್ಟಾರ್ ಯಶ್ ಮಧ್ಯಪ್ರದೇಶ ಪ್ರವಾಸ ಕೈಗೊಂಡಿದ್ದು, ಉಜ್ಜೈನ್ ನಲ್ಲಿನ ಮಹಾಕಾಳೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಈ ಬೆನ್ನಲ್ಲೇ ಭೋಪಾಲ್ ನಲ್ಲಿ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಅವರನ್ನು ಯಶ್ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.
Yash ರಾವಣನಾಗಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಶೂಟ್ ಮುಂಬೈನಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಅವರು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವಾಲಯಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸಿಎಂ ಮೋಹನ್ ಯಾದವ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.

ನಾನು ಶಿವನ ಭಕ್ತ, ಅದಕ್ಕಾಗಿಯೇ ಇಲ್ಲಿ ಬಂದೆ: 'ರಾವಣ' ಶೂಟಿಂಗ್ ಗೂ ಮುನ್ನ ಮಹಾಕಾಳೇಶ್ವರನ ಸನ್ನಿಧಿಯಲ್ಲಿ ಯಶ್ ಪೂಜೆ!
‘ಕೆಜಿಎಫ್ 2’ ಬಳಿಕ ದೇಶಾದ್ಯಂತ ಜನಪ್ರಿಯಗೊಂಡಿರುವ ಯಶ್, ತಮ್ಮ ರಾಜ್ಯಕ್ಕೆ ಬರುತ್ತಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಮಧ್ಯ ಪ್ರದೇಶ ಸಿಎಂ ಮೋಹನ್ ಯಾದವ್ ಭೇಟಿಗೆ ಅವಕಾಶ ಕಲ್ಪಿಸಿದ್ದಾರೆ. ಆ ಬಳಿಕ ಸೌಹಾರ್ದಯುತ ಭೇಟಿ ನಡೆದಿದೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ.
ಯಶ್ ‘ಟಾಕ್ಸಿಕ್’ ಚಿತ್ರದ ಒಂದಷ್ಟು ಪೋರ್ಷನ್ನ ಶೂಟ್ ಪೂರ್ಣಗೊಳಿಸಿದ್ದಾರೆ. ಈಗ ಅವರ ಗಮನ ‘ರಾಮಾಯಣ’ ಚಿತ್ರದ ಮೇಲೆ ಇದೆ. ಇತ್ತೀಚೆಗೆ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ‘ಕೆಜಿಎಫ್ 3’ ಕೆಲಸಗಳು ಶೀಘ್ರವೇ ಆರಂಭ ಆಗಲಿದೆ ಎನ್ನುವ ಸೂಚನೆ ಕೊಟ್ಟಿದ್ದಾರೆ. ಈ ಸಿನಿಮಾ ಕೆಲಸಗಳು ಪೂರ್ಣಗೊಂಡ ಬಳಿಕ ಯಶ್ ಅವರು ‘ಕೆಜಿಎಫ್ 3’ ಕೆಲಸಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


