ಜಾರ್ಖಂಡ್'ನಲ್ಲಿ ಎನ್‌ಕೌಂಟರ್: 5 ನಕ್ಸಲರು ಹತ
ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

ರಾಂಚಿ: ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಪೊಲೀಸರು ಸೋಮವಾರ ನಡೆಸಿರುವ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಲಾಲ್ಪಾನಿಯಾ ಪ್ರದೇಶದ ಲುಗು ಬೆಟ್ಟ ಪ್ರದೇಶದಲ್ಲಿ ಇಂದು ಬೆಳಿಗ್ಗೆ 5.30 ರ ಸುಮಾರಿಗೆ ಗುಂಡಿನ ಚಕಮಕಿ ಆರಂಭವಾಗಿದ್ದು, ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
209 ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆ್ಯಕ್ಷನ್ (ಕೋಬ್ರಾ) ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಆರು ನಕ್ಸಲರು ಸಾವನ್ನಪ್ಪಿದ್ದು, ಎರಡು ಐಎನ್‌ಎಸ್‌ಎಎಸ್ ರೈಫಲ್‌ಗಳು, ಒಂದು ಸೆಲ್ಫ್ ಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ಮತ್ತು ಒಂದು ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ ವೇಳೆ ಯಾವುದೇ ಯಾವುದೇ ಭದ್ರತಾ ಸಿಬ್ಬಂದಿಯೂ ಗಾಯಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



