ದೇಶ

ಕೇಂದ್ರದ ಭಾಷಾ ಒತ್ತಡದ ಮಧ್ಯೆ, ಶಾಲೆಗಳಲ್ಲಿ ಹಿಂದಿ ಕಡ್ಡಾಯ ಆದೇಶಕ್ಕೆ ಮಹಾರಾಷ್ಟ್ರ ಸರ್ಕಾರ ತಡೆ

ಮಹಾರಾಷ್ಟ್ರ ಸರ್ಕಾರ ರಾಜ್ಯದ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಕಳೆದ ವಾರ ಆದೇಶ ಹೊರಡಿಸಿತ್ತು.

ಕೇಂದ್ರದ ಭಾಷಾ ಒತ್ತಡದ ಮಧ್ಯೆ, ಶಾಲೆಗಳಲ್ಲಿ ಹಿಂದಿ ಕಡ್ಡಾಯ ಆದೇಶಕ್ಕೆ ಮಹಾರಾಷ್ಟ್ರ ಸರ್ಕಾರ ತಡೆ
ದೇವೇಂದ್ರ ಫಡ್ನವೀಸ್ — TNIE
Published On :

ಮುಂಬೈ: ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿ ಭಾಷೆಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಹೊರಡಿಸಿದ್ದ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಸಚಿವ ದಾದಾ ಭೂಸೆ ಅವರು ಮಂಗಳವಾರ ತಿಳಿಸಿದ್ದಾರೆ.

ಈ ವಿಷಯದಲ್ಲಿ ಹೊಸ ಸರ್ಕಾರಿ ನಿರ್ಣಯ(ಜಿಆರ್) ಹೊರಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರ ಸರ್ಕಾರ ರಾಜ್ಯದ ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಿಂದಿಯನ್ನು ಮೂರನೇ ಭಾಷೆಯಾಗಿ ಕಡ್ಡಾಯಗೊಳಿಸಿ ಕಳೆದ ವಾರ ಹೊರಡಿಸಿದ್ದ ಆದೇಶಕ್ಕೆ ವಿರೋಧ ಪಕ್ಷಗಳು ಸೇರಿದಂತೆ ವಿವಿಧ ಭಾಗಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮಹಾರಾಷ್ಟ್ರ ಸರ್ಕಾರದ ಭಾಷಾ ಸಮಾಲೋಚನಾ ಸಮಿತಿಯು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಈ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.