"ನ್ಯಾಯಾಲಯ ಹೇಳಿದ ಎಲ್ಲವೂ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ: ಧಂಕರ್ ಗೆ ಕಪಿಲ್ ಸಿಬಲ್ ತಿರುಗೇಟು
ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.

ನವದೆಹಲಿ: ಸರ್ವೋಚ್ಛ ನ್ಯಾಯಾಲಯ ಹೇಳಿರುವುದು ಎಲ್ಲವೂ ದೇಶದ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್ ವಿರುದ್ಧ ಮಂಗಳವಾರ ಮತ್ತೆ ವಾಗ್ದಾಳಿ ನಡೆಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಅವರು ತಿರುಗೇಟು ನೀಡಿದ್ದಾರೆ.
ಸಂಸತ್ತೇ ಸರ್ವೋಚ್ಚ. ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ಸರ್ವೋಚ್ಚ ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಜಗದೀಪ್ ಧನಕರ್ ಅವರು ಹೇಳಿದ್ದಾರೆ.
ದೆಹಲಿ ವಿಶ್ವವಿದ್ಯಾಲಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಜ್ಯಸಭೆಯ ಅಧ್ಯಕ್ಷರೂ ಆಗಿರುವ ಧನಕರ್, ಸಾಂವಿಧಾನಿಕ ಪ್ರಾಧಿಕಾರದ ಪ್ರತಿಯೊಂದು ಪದವೂ ರಾಷ್ಟ್ರದ ಸರ್ವೋಚ್ಚ ಶ್ರೇಷ್ಠ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಡುತ್ತದೆ ಎಂದು ಹೇಳಿದರು.
ಧನಕರ್ ಹೇಳಿಕೆಗೆ X ಮೂಲಕ ಪ್ರತಿಕ್ರಿಯಿಸಿರುವ ಸಿಬಲ್, "ಸುಪ್ರೀಂ ಕೋರ್ಟ್: ಸಂಸತ್ತು ಕಾನೂನುಗಳನ್ನು ಅಂಗೀಕರಿಸುವ ಪೂರ್ಣ ಅಧಿಕಾರವನ್ನು ಹೊಂದಿವೆ. ಸುಪ್ರೀಂ ಕೋರ್ಟ್ ಸಂವಿಧಾನವನ್ನು ಅರ್ಥೈಸುವ ಮತ್ತು ಸಂಪೂರ್ಣ ನ್ಯಾಯವನ್ನು ನೀಡುವ ಬಾಧ್ಯತೆಯನ್ನು ಹೊಂದಿದೆ(ಆರ್ಟಿಕಲ್ 142)" ಎಂದು ತಿಳಿಸಿದ್ದಾರೆ.
"ನ್ಯಾಯಾಲಯ ಹೇಳಿದ ಎಲ್ಲವೂ: ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ಅನುಗುಣವಾಗಿದೆ; ರಾಷ್ಟ್ರೀಯ ಹಿತಾಸಕ್ತಿಯಿಂದ ಮಾರ್ಗದರ್ಶಿಸಲ್ಪಟ್ಟಿದೆ" ಎಂದು ಪಕ್ಷೇತರ ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



