ದೇಶ

ಮಣಿಪುರ: ನಾಲ್ವರು ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶಕ್ಕೆ!

ಬಂಧಿತರಿಂದ ಐದು ಕಾಟ್ರಿಡ್ಜ್‌ಗಳು, 32 ಪಿಸ್ತೂಲ್ ಗಳು, ಆರು ಮೊಬೈಲ್ ಫೋನ್ ಗಳು ಮತ್ತು ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಮಣಿಪುರ: ನಾಲ್ವರು ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶಕ್ಕೆ!
ಭದ್ರತಾ ಪಡೆಗಳ ಸಾಂದರ್ಭಿಕ ಚಿತ್ರ
Published On :

ಇಂಫಾಲ: ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ವಿವಿಧ ಕಡೆಗಳಲ್ಲಿ ನಿಷೇಧಿತ ಸಂಘಟನೆಯ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

PREPAK(pro)ಸಂಘಟನೆಗೆ ಸೇರಿದ ಮಹಿಳೆ ಸೇರಿದಂತೆ ಮೂವರು ಉಗ್ರರನ್ನು ಸೋಮವಾರ ನಗಖಪತ್ ಅಡ್ವೆಂಚರ್ ಖರೋಕ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಧಿತರಿಂದ ಐದು ಕಾಟ್ರಿಡ್ಜ್‌ಗಳು, 32 ಪಿಸ್ತೂಲ್ ಗಳು, ಆರು ಮೊಬೈಲ್ ಫೋನ್ ಗಳು ಮತ್ತು ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರು ಇತ್ತೀಚಿಗೆ ಇಂಫಾಲ್ ಪೂರ್ವ ಜಿಲ್ಲೆಯ ನವೋರೆಮ್ ಬಿರಾಹರಿ ಕಾಲೇಜಿನ ಬಳಿ ಸುಲಿಗೆಗಾಗಿ ಇಬ್ಬರು ವ್ಯಕ್ತಿಗಳನ್ನು ಅಪಹರಿಸಿದ ಪ್ರಕರಣದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

PREPAK ನ ಮತ್ತೋರ್ವ ಉಗ್ರನನ್ನು ಇಂಫಾಲ್ ಪೂರ್ವ ಜಿಲ್ಲೆಯ ಸಾವೊಂಬಂಗ್‌ನಿಂದ ಭಾನುವಾರ ಬಂಧಿಸಲಾಗಿತ್ತು. ಈ ಮಧ್ಯೆ ತೆಂಗ್ನೌಪಾಲ್ ಜಿಲ್ಲೆಯ ಯಾಂಗೌಬಂಗ್ ಮತ್ತು ಟಿ ಬೊಂಗ್ಮೋಲ್ ಗ್ರಾಮಗಳಲ್ಲಿ ಶನಿವಾರ ನಡೆದ ಶೋಧ ಕಾರ್ಯಾಚರಣೆ ವೇಳೆ 22 ಐಇಡಿಗಳು, ಏಳು ಮೊಬೈಲ್ ಫೋನ್‌ ಮತ್ತಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.