ಒಡಿಶಾ: ಅಪ್ರಾಪ್ತ ಬಾಲಕಿ ಅಪಹರಿಸಿ, ಅರಣ್ಯ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ
ಈ ಘಟನೆ ಏಪ್ರಿಲ್ 21 ಮತ್ತು ಏಪ್ರಿಲ್ 22 ರ ಮಧ್ಯರಾತ್ರಿ ನಡೆದಿದ್ದು, ಮೌಖಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು.

ರೂರ್ಕೆಲಾ: ಮೂವರು ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಹಳ್ಳಿಯ ರಸ್ತೆಯಿಂದ ವಾಹನದಲ್ಲಿ ಅಪಹರಿಸಿ, ಒಡಿಶಾದ ರೂರ್ಕೆಲಾದಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ತಲ್ಸಾರಾ ಪ್ರದೇಶದ ಕಾಡಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಘಟನೆ ಏಪ್ರಿಲ್ 21 ಮತ್ತು ಏಪ್ರಿಲ್ 22 ರ ಮಧ್ಯರಾತ್ರಿ ನಡೆದಿದ್ದು, ಮೌಖಿಕ ದೂರಿನ ಆಧಾರ ಮೇಲೆ ಮೂವರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆಯಲಾಯಿತು ಮತ್ತು ಅವರು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಏಪ್ರಿಲ್ 21 ರಂದು ತಡರಾತ್ರಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸಂತ್ರಸ್ತ ಬಾಲಕಿ ಇತರ ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ತಮ್ಮ ಮನೆಗಳಿಗೆ ನಡೆದುಕೊಂಡು ಹೋಗುತ್ತಿದ್ದಾರೆ ಅಪಹರಿಸಿದ್ದಾರೆ ಎಂದು ಸುಂದರಗಢ ಎಸ್ಪಿ ಪ್ರತ್ಯೂಷ್ ದಿವಾಕರ್ ಅವರು ಹೇಳಿದ್ದಾರೆ.
ಇಬ್ಬರು ಯುವಕರು ಮತ್ತು ಇಬ್ಬರು ಬಾಲಕಿಯರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಸಂತ್ರಸ್ತ ಬಾಲಕಿಯನ್ನು ಬಲವಂತವಾಗಿ ವಾಹನದಲ್ಲಿ ಕರೆದೊಯ್ಯಲಾಯಿತು ಎಂದು ದಿವಾಕರ್ ತಿಳಿಸಿದ್ದಾರೆ.
ನಂತರ, ಹತ್ತಿರದ ಕಾಡಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಬಳಿಕ ನಿರ್ಜನ ಸ್ಥಳದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಪೊಲೀಸರು ಶೀಘ್ರದಲ್ಲೇ ಸಂತ್ರಸ್ತ ಬಾಲಕಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ ಮತ್ತು ಅದರ ಆಧಾರದ ಮೇಲೆ ಹೆಚ್ಚಿನ ತನಿಖೆ ಮುಂದುವರಿಯಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.
ಅಪರಾಧಿಗಳಲ್ಲಿ ಇಬ್ಬರು ವಯಸ್ಕರು ಎಂದು ಕಂಡುಬಂದಿದ್ದರೂ, ಮೂರನೇ ಅಪರಾಧಿ(17) ಅಪ್ರಾಪ್ತ ವಯಸ್ಕ ಎಂದು ಹೇಳಿಕೊಂಡಿದ್ದಾರೆ. ಅವರ ನಿಜವಾದ ವಯಸ್ಸಿನ ಪರಿಶೀಲನೆ ನಡೆಯುತ್ತಿದೆ ಎಂದು ಎಸ್ಪಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



