Pahalgam attack: ಪ್ರವಾಸಿಗರಿಗಾಗಿ 24/7 ತುರ್ತು ಸಹಾಯವಾಣಿ ಆರಂಭ
ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪ್ರವಾಸಿಗರಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಮಂಗಳವಾರ 24/7 ತುರ್ತು ಸಹಾಯವಾಣಿ ಆರಂಭಿಸಿದೆ.
"ಸಹಾಯ ಅಥವಾ ಮಾಹಿತಿ ಅಗತ್ಯವಿರುವ ಪ್ರವಾಸಿಗರಿಗಾಗಿ ಅನಂತನಾಗ್ ಜಿಲ್ಲಾಡಳಿತವು 24x7 ತುರ್ತು ಸಹಾಯ ಕೇಂದ್ರವನ್ನು ಸ್ಥಾಪಿಸಿದೆ. ಪ್ರವಾಸಿಗರು ಮಾಹಿತಿ ಅಥವಾ ಸಹಾಯಕ್ಕಾಗಿ 01932222337, 7780885759, 9697982527 ಅಥವಾ 6006365245 ಅನ್ನು ಸಂಪರ್ಕಿಸಬಹುದು" ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ.
ಶ್ರೀನಗರದಲ್ಲಿಯೂ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ಘಟನೆಯ ಕುರಿತು ಸಹಾಯಕ್ಕಾಗಿ ಪ್ರವಾಸಿಗರು 01942457543, 01942483651 ಅಥವಾ 7006058623 ಅನ್ನು ಸಂಪರ್ಕಿಸಬಹುದು ಎಂದು ವಕ್ತಾರರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಭಯೋತ್ಪಾದಕರು, ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ 27ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



