ಪಹಲ್ಗಾಮ್ ಭಯೋತ್ಪಾದಕ ದಾಳಿ: ಪ್ರವಾಸಿಗರ ರಕ್ಷಣೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ಕೋರಿ 'ಸುಪ್ರೀಂ'ನಲ್ಲಿ ಪಿಐಎಲ್
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆ ಸುರಕ್ಷಿತ ಮತ್ತು ಸುಭದ್ರವಾಗಿರುವುದಕ್ಕೆ ನಿರ್ದೇಶನಗಳನ್ನು ನೀಡುವಂತೆ ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕೋರಿದೆ.
ಭಯೋತ್ಪಾದಕ ದಾಳಿಗೆ ಸೂಕ್ಷ್ಮವಾಗಿರುವ ಗುಡ್ಡಗಾಡು ರಾಜ್ಯಗಳು ಮತ್ತು ದೂರದ ಸ್ಥಳಗಳಿಗೆ ಭೇಟಿ ನೀಡುವ ಪ್ರವಾಸಿಗರ ರಕ್ಷಣೆಗಾಗಿ ತಕ್ಷಣದ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಿಗೆ ಸಶಸ್ತ್ರ ಭದ್ರತೆಯನ್ನು ನಿಯೋಜಿಸುವಂತೆ ಕೇಂದ್ರ ಗೃಹ ಸಚಿವಾಲಯ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಾರಂಭವಾಗಲಿರುವ ಅಮರನಾಥ ಯಾತ್ರೆ ಸುರಕ್ಷಿತ ಮತ್ತು ಸುಭದ್ರವಾಗಿರುವುದಕ್ಕೆ ನಿರ್ದೇಶನಗಳನ್ನು ನೀಡುವಂತೆ ವಕೀಲ ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕೋರಿದೆ.
ಪ್ರವಾಸಿ ಸ್ಥಳಗಳಲ್ಲಿ, ವಿಶೇಷವಾಗಿ ಪ್ರವಾಸಿಗರು ಭೇಟಿ ನೀಡುವ ಮತ್ತು ಸೇರುವ ದೂರದ ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳಲ್ಲಿ ಸರಿಯಾದ ವೈದ್ಯಕೀಯ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ನಿರ್ದೇಶನ ನೀಡುವಂತೆ ತಿವಾರಿ ಅವರ ಅರ್ಜಿಯಲ್ಲಿ ಕೋರಲಾಗಿದೆ, ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ತ್ವರಿತ ವೈದ್ಯಕೀಯ ನೆರವು ದೊರೆಯುವಂತೆ ಮಾಡುವುದು ಈ ಮನವಿಯ ಉದ್ದೇಶವಾಗಿದೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಮೊದಲ ಬಾರಿಗೆ ಇಷ್ಟೊಂದು ಪ್ರವಾಸಿಗರ ಮೇಲೆ ಒಂದೇ ಬಾರಿಗೆ ದಾಳಿ ನಡೆಸಲಾಗಿದೆ ಮತ್ತು ಪ್ರವಾಸಿಗರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವಲ್ಲಿ ಆಡಳಿತದ ನಿರ್ಲಕ್ಷ್ಯ ಕಂಡುಬಂದಿದೆ ಎಂದು ಪಿಐಎಲ್ ಆರೋಪಿಸಿದೆ.
"ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ವಿಭಾಗವು ಪ್ರವಾಸಿಗರ ರಕ್ಷಣೆಗಾಗಿ ಮಾರ್ಗಸೂಚಿಗಳನ್ನು ಹೊಂದಿದೆ. ಆದರೆ ಭಾರತ ಅದನ್ನು ಅನುಸರಿಸುತ್ತಿಲ್ಲ" ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಪ್ರವಾಸಿಗರು ಭಯೋತ್ಪಾದಕ ಚಟುವಟಿಕೆಗಳಿಗೆ ಸುಲಭವಾದ ಗುರಿಯಾಗಿದ್ದರು ಎಂದು ತಿವಾರಿ ಹೇಳಿದ್ದಾರೆ. ಬೇಸಿಗೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಭೇಟಿ ನೀಡುವುದರಿಂದ ಉತ್ತರ ಭಾರತದ ಹೆಚ್ಚಿನ ರಾಜ್ಯಗಳ ಆರ್ಥಿಕತೆಯು ಮುಖ್ಯವಾಗಿ ಪ್ರವಾಸೋದ್ಯಮ ವಲಯವನ್ನು ಅವಲಂಬಿಸಿದೆ.
"ಭಯೋತ್ಪಾದಕರ ದಾಳಿಗಳು ಈ ವಲಯದ ಆರ್ಥಿಕತೆಯನ್ನು ಕಡಿಮೆ ಮಾಡಬಹುದು ಮತ್ತು ಪರಿಣಾಮ ಬೀರಬಹುದು. ಪ್ರವಾಸಿಗರ ರಕ್ಷಣೆಗಾಗಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಪಹಲ್ಗಾಂವ್ ಸೂಕ್ಷ್ಮ ಪ್ರದೇಶವಾಗಿದ್ದರೂ ಸಹ ಉಗ್ರ ದಾಳಿ ನಡೆದಾಗ ಯಾವುದೇ ರೀತಿಯ ಭದ್ರತಾ ವ್ಯವಸ್ಥೆಗಳಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಪ್ರವಾಸಿಗರು ದೃಶ್ಯವೀಕ್ಷಣೆಗೆ ಸೇರುವ ಮತ್ತು ಶಾಂತಿಯುತ ವಾತಾವರಣ ಮತ್ತು ಪ್ರಕೃತಿಯನ್ನು ಆನಂದಿಸುವ ದೂರದ ಪ್ರದೇಶಗಳಲ್ಲಿ, ಕೆಲವು ರೀತಿಯ ಸಶಸ್ತ್ರ ಭದ್ರತೆ ಇರಬೇಕು. ಅಂತಹ ಕ್ರಮಗಳಿಂದ ಮಾತ್ರ ನಾವು ಪ್ರವಾಸಿಗರನ್ನು ಭಯೋತ್ಪಾದಕ ದಾಳಿಯಿಂದ ರಕ್ಷಿಸಬಹುದು" ಎಂದು ಪಿಐಎಲ್ ಸೇರಿಸಿದೆ.
ನಮ್ಮ ದೇಶದಲ್ಲಿ ದಿನವಿಡೀ ವಿಐಪಿಗಳು ಯಾವಾಗಲೂ ರಕ್ಷಣೆಯಲ್ಲಿರುತ್ತಾರೆ ಎಂದು ತಿವಾರಿ ಕೋರ್ಟ್ ಗಮನ ಸೆಳೆದಿದ್ದಾರೆ. "ಅವರು ಯಾವುದೇ ರಸ್ತೆಯಲ್ಲಿ ಪ್ರಯಾಣಿಸುವಾಗ, ನಾಗರಿಕರಿಗೆ ಸಂಚಾರವನ್ನು ನಿರ್ಬಂಧಿಸಲಾಗುತ್ತದೆ. ವಿಐಪಿಗಳ ಭದ್ರತೆಗೆ ಸಾಕಷ್ಟು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ಆದರೆ ಸಾಮಾನ್ಯ ಜನರು ಯಾವಾಗಲೂ ಬಳಲುತ್ತಿದ್ದಾರೆ" ಎಂದು ಅವರು ತಮ್ಮ ಪಿಐಎಲ್‌ನಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


