35 ವರ್ಷಗಳಲ್ಲಿ ಇದೇ ಮೊದಲು: ಪಹಲ್ಗಾಮ್ ಪೈಶಾಚಿಕ ದಾಳಿ ವಿರುದ್ಧ ಕಾಶ್ಮೀರ, ಜಮ್ಮು ಸಂಪೂರ್ಣ ಬಂದ್!
ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿ, ಮುಂಗಟ್ಟುಗಳು, ಪೆಟ್ರೋಲ್ ಬಂಕ್ ಗಳನ್ನು ಕೂಡಾ ಬಂದ್ ಮಾಡಲಾಗಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನ ಬೈಸರನ್ ಪ್ರದೇಶದಲ್ಲಿ ಪ್ರವಾಸಿಗರ ಮೇಲೆ ಉಗ್ರಗಾಮಿ ಉಗ್ರಗಾಮಿ ದಾಳಿಯನ್ನು ವಿರೋಧಿಸಿ ಕಾಶ್ಮೀರ ಮತ್ತು ಜಮ್ಮು ಪ್ರದೇಶಗಳಲ್ಲಿ ಸಂಪೂರ್ಣ ಬಂದ್ ಆಚರಿಸಲಾಗುತ್ತಿದೆ. ಮಂಗಳವಾರ ನಡೆದ ಈ ದಾಳಿಯಲ್ಲಿ 28 ಜನರು ಸಾವನ್ನಪ್ಪಿದರು. ಇದು 35 ವರ್ಷಗಳಲ್ಲಿ ಉಗ್ರರ ದಾಳಿಯ ವಿರುದ್ಧ ಕಾಶ್ಮೀರ ಕಣಿವೆಯಲ್ಲಿ ನಡೆದ ಮೊದಲ ಪ್ರತಿಭಟನೆಯಾಗಿದೆ.
ಶ್ರೀನಗರ ಮತ್ತು ಕಣಿವೆಯ ಇತರ ಭಾಗಗಳಲ್ಲಿ ಅಂಗಡಿ, ಮುಂಗಟ್ಟುಗಳು, ಪೆಟ್ರೋಲ್ ಬಂಕ್ ಮುಚ್ಚಲಾಗಿದೆ. ರಸ್ತೆಗಳಲ್ಲಿ ಖಾಸಗಿ ವಾಹನಗಳು ಕಂಡುಬಂದರೂ ಸಾರ್ವಜನಿಕ ಸಾರಿಗೆ ವಿರಳವಾಗಿತ್ತು. ಖಾಸಗಿ ಶಾಲೆಗಳು ಮುಚ್ಚಿದ್ದರೆ, ಸರ್ಕಾರಿ ಶಾಲೆಗಳು ತೆರೆದಿದ್ದವು.
ಕಾಶ್ಮೀರ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ (KCCI)ಕಾಶ್ಮೀರ ವ್ಯಾಪಾರಿಗಳು ಮತ್ತು ತಯಾರಕರ ಒಕ್ಕೂಟ (KTMF) ಮುತ್ತಹಿದಾ ಮಜ್ಲಿಸ್ ಉಲೇಮಾ (MMU) ಮತ್ತು ಜಮ್ಮು ಮತ್ತು ಕಾಶ್ಮೀರ ಗ್ರ್ಯಾಂಡ್ ಮುಫ್ತಿ ನಾಸಿರ್-ಉಲ್-ಇಸ್ಲಾಂ ಸಂಘಟನೆಗಳು ಜಂಟಿಯಾಗಿ ಬಂದ್‌ಗೆ ಕರೆ ನೀಡಿವೆ. ದಾಳಿಯನ್ನು ಖಂಡಿಸಿರುವ ಮುಫ್ತಿ, ಇಂತಹ ಭಯೋತ್ಪಾದನೆ ಮತ್ತು ಹಿಂಸಾಚಾರದ ಕೃತ್ಯಗಳು ಸ್ವೀಕಾರಾರ್ಹವಲ್ಲ . ಭಯೋತ್ಪಾದನೆಯ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ನಿಲ್ಲಬೇಕು ಎಂದು ಮಫ್ತಿ ಒತ್ತಾಯಿಸಿದ್ದಾರೆ.
ಜಮ್ಮುವಿನಲ್ಲೂ ಬಂದ್‌ಗೆ ಭಾರಿ ಬೆಂಬಲ ವ್ಯಕ್ತವಾಗಿದೆ. ಜಮ್ಮು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಅಧ್ಯಕ್ಷ ಅರುಣ್ ಗುಪ್ತಾ, ಜಮ್ಮು ಬಾರ್ ಅಸೋಸಿಯೇಷನ್‌ನೊಂದಿಗೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ.
ಹಲವಾರು ರಾಜಕೀಯ ಮುಖಂಡರು ಮತ್ತು ಪಕ್ಷಗಳು ಕೂಡ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಪೀಪಲ್ಸ್ ಕಾನ್ಫರೆನ್ಸ್ (ಪಿಸಿ) ಅಧ್ಯಕ್ಷ ಮತ್ತು ಶಾಸಕರಾದ ಹಂದ್ವಾರ, ಸಜದ್ ಗನಿ ಲೋನ್ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಹೇಯ ಕೃತ್ಯವನ್ನು ಖಂಡಿಸಿದ್ದಾರೆ.
ಕಣಿವೆಯಾದ್ಯಂತ ವಿಶೇಷವಾಗಿ ಪ್ರಮುಖ ಪ್ರವಾಸಿ ತಾಣಗಳ ಸುತ್ತಲೂ ಭದ್ರತಾ ಕ್ರಮಗಳನ್ನು ಗಮನಾರ್ಹವಾಗಿ ಹೆಚ್ಚಿಸಲಾಗಿದೆ. ಅಗತ್ಯ ವಸ್ತುಗಳ ವ್ಯಾಪಾರ ಮಾಡುವ ಅಂಗಡಿಗಳನ್ನು ಮಾತ್ರ ತೆರೆದಿರಲು ಅನುಮತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನರು, ರಾಜಕೀಯ ಪಕ್ಷಗಳು, ಧಾರ್ಮಿಕ ಸಂಸ್ಥೆಗಳು ಮತ್ತು ನಾಗರಿಕ ಸಮಾಜದ ಗುಂಪುಗಳು ಒಗ್ಗೂಡುವ ಮೂಲಕ ಭಯೋತ್ಪಾದನೆ ವಿರುದ್ಧ ಬಲವಾದ ಸಂದೇಶ ರವಾನಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



